ದೇಶ- ವಿದೇಶ

ಮೋಹನ್‌ ಭಾಗವತ್‌ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ನವದೆಹಲಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ದೇಶದ್ರೋಹ ಎಸಗಿದ್ದು, ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ನಿಜವಾದ ಸ್ವಾತಂತ್ರ್ಯ 1947ರಲ್ಲಿ ಸಿಕ್ಕಿಲ್ಲ. ರಾಮಮಂದಿರ ಪ್ರತಿಷ್ಠಾಪನಾ ದಿನದಂದು ಸಿಕ್ಕಿತು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆ ನೀಡಿದ್ದರು.

ಮೋಹನ್‌ ಭಾಗವತ್‌ ಹೇಳಿಕೆ ವಿರುದ್ಧ ಕಾಂಗ್ರೆಸ್‌ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ರಾಹುಲ್‌ ಗಾಂಧಿ ಕೂಡ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಜನರು ಅಂತಹ ಅಸಂಬದ್ಧ ಮಾತುಗಳನ್ನು ಕೇಳುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದರು.

ಮೋಹನ್‌ ಭಾಗವತ್‌ ಅವರು ಸ್ವಾತಂತ್ರ್ಯ ಚಳುವಳಿ ಹಾಗೂ ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ದೇಶಕ್ಕೆ ಹೇಳುವ ಧೈರ್ಯ ಹೊಂದಿದ್ದಾರೆ. ಅವರು ನಿನನೆ ದೇಳಿದ್ದು ದೇಶದ್ರೋಹ. ಏಕೆಂದರೆ ಅವರು ಸಂವಿಧಾನ ಅಮಾನ್ಯವಾಗಿದೆ ಮತ್ತು ಬ್ರಿಟಿಷರ ವಿರುದ್ಧದ ಹೋರಾಟವೂ ಅಮಾನ್ಯ ಎಂದು ಹೇಳುತ್ತಿದ್ದಾರೆ ಎಂದರು.

ಇದನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನ ಅವರಿಗೆ ಇದೆ. ಬೇರೆ ಯಾವುದೇ ದೇಶದಲ್ಲಿ ಈ ರೀತಿ ಹೇಳಿದ್ದರೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ. ಇದು ಸತ್ಯ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಚಾ.ನಗರ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ: ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಸಹಾಯಕಿಯರ…

4 mins ago

ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ| ಜೂನ್‌ 2027ರೊಳಗೆ ಪೂರ್ಣಗೊಳ್ಳಲಿದೆ: ಸಂಸದ ಯದುವೀರ್‌

ಮೈಸೂರು: ಜೂನ್‌ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್‌…

19 mins ago

ಮೈಸೂರು ಇನ್ಫೋಸಿಸ್ | ಸಿಗದ ಚಿರತೆ ; ಸೆರೆ ಕಾರ್ಯಚರಣೆ ಸ್ಥಗಿತ

ಮೈಸೂರು: ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ನಡೆದ ಚಿರತೆ ಸೆರೆ ಕಾರ್ಯಾಚರಣೆಯನ್ನು …

29 mins ago

ರಮೇಶ್‌ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ: ಬಿ.ವೈ.ವಿಜಯೇಂದ್ರ

ಕೊಪ್ಪಳ: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬಿ.ಎಸ್‌.ಯಡಿಯೂರಪ್ಪ ಅವರು ಹಳ್ಳಿಗಳಲ್ಲಿ ಸುತ್ತಾಡಿ ಪಕ್ಷವನ್ನು ಕಟ್ಟಿದ್ದಾರೆ. ಆದರೆ ಇತ್ತೀಚೆಗೆಷ್ಟೇ ಬಿಜೆಪಿಗೆ ಬಂದಿರುವ ರಮೇಶ್‌…

36 mins ago

ಬೆಳಗಾವಿ | ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕಿಯರ ಮೇಲೆ ಗ್ಯಾಂಗ್‌ ರೇಪ್‌ ; ಇಬ್ಬರ ಬಂಧನ

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವದತ್ತಿ ಗ್ರಾಮದ ಬಳಿಯ ಗುಡ್ಡಾಗಾಡು ಪ್ರದೇಶದಲ್ಲಿ 17 ವರ್ಷದ ಇಬ್ಬರು ಯುವತಿಯರ ಮೇಲೆ…

47 mins ago

ಭ್ರಷ್ಟಾಚಾರದ ಆರೋಪ: ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕಂದಾಯ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದು, ಆ ಅಧಿಕಾರಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಬೈರೇಗೌಡರ ವಿರುದ್ಧ…

1 hour ago