Mysore
21
scattered clouds

Social Media

ಭಾನುವಾರ, 16 ಮಾರ್ಚ್ 2025
Light
Dark

ಪುಲ್ವಾಮಾ ದಾಳಿಗೆ 6 ವರ್ಷ: ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ನಮನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಉಗ್ರರು ನಡೆಸಿದ್ದ ದಾಳಿ ಇಂದಿಗೆ 6 ವರ್ಷಗಳು ಕಳೆದಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ನಮನ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ೨೦೧೯ರಲ್ಲಿ ನಡೆದ ಭೀಕರ ದಾಳಿಯಲ್ಲಿ ಧೈರ್ಯಶಾಲಿ ೪೦ ಯೋಧರನ್ನು ಕಳೆದುಕೊಂಡಿದ್ದೇವೆ. ನಮ್ಮ ದೇಶ ಈ ಯೋಧರ ತ್ಯಾಗ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ವಿನಮ್ರ ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ನಮ್ಮ ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ರಾಜನಾಥ್‌ ಸಿಂಗ್‌

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ೨೦೧೯ರ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾರತವು ಧೈರ್ಯಶಾಲಿ ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ಕಳೆದುಕೊಂಡಿತು. ದೇಶಕ್ಕಾಗಿ ಯೋಧರು ಮಾಡಿದ ತ್ಯಾಗವನ್ನು ನಾವು ಎಂದಿಗೂ ಮರೆಯಲಾಗುವುದಿಲ್ಲ. ಹೀಗಾಗಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುತ್ತೇನೆ. ಅಲ್ಲದೇ ಹುತಾತ್ಮ ಯೋಧರ ಕುಟುಂಬದೊಂದಿಗೆ ನಮ್ಮ ಸರ್ಕಾರ ಯಾವಾಗಲೂ ಅವರೊಂದಿಗೆ ಇರುತ್ತದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ದೃಢ ನಿಶ್ಚಯದಿಂದ ಇದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪುಲ್ವಾಮ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ರಾಷ್ಟ್ರ ರಕ್ಷಣೆಯ ಮಹತ್ ಕಾರ್ಯದಲ್ಲಿ ಹುತಾತ್ಮರಾದ ಎಲ್ಲಾ ವೀರಯೋಧರ ತ್ಯಾಗ – ಬಲಿದಾನವನ್ನು ಸ್ಮರಿಸುತ್ತಾ, ನನ್ನ ಗೌರವ ನಮನ ಅರ್ಪಿಸುತ್ತೇನೆ ಎಂದು ನಮನ ಸಲ್ಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಭಾರತೀಯರು ಎಂದೂ ಮರೆಯಲಾರದ ಕರಾಳ ದಿನ ‘ಪುಲ್ವಾಮಾ ದಾಳಿ ಹುತಾತ್ಮರ ಸಂಸ್ಮರಣಾ ದಿನ’. ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು. ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ ಎಂದು ತಿಳಿಸಿದ್ದಾರೆ.

ಆರ್‌.ಅಶೋಕ್‌

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು, ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು. ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ ಎಂದಿದ್ದಾರೆ.

Tags: