ನವದೆಹಲಿ: ಅನುಸೂಚಿತ ಜಿಲ್ಲೆಗಳು/ ಪ್ರದೇಶದ ಶಿಕ್ಷಕರಿಗೆ ಶೇ 100ರಷ್ಟು ಮೀಸಲಾತಿ ಒದಗಿಸುವುದು ಅಸಾಂವಿಧಾನಿಕವಾಗಿದ್ದು ಇದರಿಂದ ಶಿಕ್ಷಣ ಗುಣಮಟ್ಟದಲ್ಲಿ ರಾಜಿಯಾದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ
ಹೀಗಾಗಿ ಜಾರ್ಖಂಡ್‌ನ 13 ಅನುಸೂಚಿತ ಪ್ರದೇಶಗಳ ನಿವಾಸಿಗಳಿಗೆ ಶೇ 100 ಮೀಸಲಾತಿ ಒದಗಿಸಿ ರಾಜ್ಯ ಸರ್ಕಾರ 2016ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ರದ್ದುಗೊಳಿಸಿ ಜಾರ್ಖಂಡ್ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ನೀಡಿದ್ದ ತೀರ್ಪನ್ನು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠ ಎತ್ತಿಹಿಡಿದಿದೆ.
“ಆಯಾ ಅಥವಾ ಕೆಲವು ಜಿಲ್ಲೆಗಳ ಶಿಕ್ಷಕರ ಪರವಾಗಿ 100% ಮೀಸಲಾತಿ ನೀಡುವ ಮೂಲಕ ಮತ್ತು ಹೆಚ್ಚು ಅರ್ಹ ಶಿಕ್ಷಕರ ನೇಮಕಾತಿ ನಿಷೇಧಿಸುವ ಮೂಲಕ ಶಾಲೆಗೆ ಹೋಗುವ ಮಕ್ಕಳ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲಾಗದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈಗಾಗಲೇ ಇಂದ್ರ ಸಾಹ್ನಿ ಮತ್ತು ಚೀಬ್ರೋಲು ರಾವ್ ಪ್ರತ್ಯೇಕ ಪ್ರಕರಣಗಳಲ್ಲಿ ಈ ಕುರಿತಾದ ಕಾನೂನನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಶೇ 100ರಷ್ಟು ಮೀಸಲಾತಿ ಒದಗಿಸುವುದು ತಾರತಮ್ಯದಿಂದ ಕೂಡಿದ್ದು ಇದನ್ನು ಅನುಮತಿಸಲಾಗದು ಎಂದು ಸರ್ವೋಚ್ಚ ನ್ಯಾಯಾಲಯ ವಿವರಿಸಿದೆ.
ಮುಂದುವರೆದು “ಸಾರ್ವಜನಿಕ ಉದ್ಯೋಗದ ಅವಕಾಶವನ್ನು ಆಕಾಂಕ್ಷಿಗಳಿಗೆ ಅನ್ಯಾಯುತವಾಗಿ ನಿರಾಕರಿಸಲಾಗದು. ಇದು ಕೆಲವರ ವಿಶೇಷ ಹಕ್ಕಲ್ಲ. ನಾಗರಿಕರಿಗೆ ಸಮಾನ ಹಕ್ಕುಗಳಿವೆ. ಒಂದು ವರ್ಗಕ್ಕೆ ಹೆಚ್ಚು ಅವಕಾಶ ನೀಡಿ ಉಳಿದವರನ್ನು ಸಂಪೂರ್ಣವಾಗಿ ಹೊರಗಿಡುವುದನ್ನು ಸಂವಿಧಾನದ ಪಿತಾಮಹರು ಆಲೋಚಿಸಿರಲಿಲ್ಲ” ಎಂದು ಪೀಠ ತಿಳಿಸಿತು.
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…
ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…
ಅಂಕಾರ: ಇಸ್ತಾನ್‌ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್…
ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ…
ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು,…