ದೇಶ- ವಿದೇಶ

ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದರೆ 11 ಲಕ್ಷ ರೂ. ಬಹುಮಾನ: ಶಾಸಕ ಸಂಜಯ್‌ ಗಾಯಕ್ವಾಡ್‌ ಘೋಷಣೆ

ನವದೆಹಲಿ: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ರದ್ದುಪಡಿಸಸುವುದಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ ರಾಹುಲ್‌ ಅವರ ನಾಲಿಗೆಯನ್ನು ಕತ್ತರಿಸಿದರೆ 11 ಲಕ್ಷ ರೂ.ಬಹುಮಾನ ನೀಡುತ್ತೇನೆ ಎಂದು ಬುಲ್ದಾನ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್‌ ಗಾಯಕ್ವಾಡ್‌ ಘೋಷಿಸಿದ್ದಾರೆ.

ಮೀಸಲಾತಿ ಬಗ್ಗೆ ರಾಹುಲ್‌ ನೀಡಿರುವ ಹೇಳಿಕೆಯೂ ಕಾಂಗ್ರೆಸ್‌ನ ಸತ್ಯ ಮುಖವನ್ನು ಬಹಿರಂಗಪಡಿಸಿದಂತಿದೆ ಎಂದು ಸೋಮವಾರ ಆರೋಪಿಸಿದ್ದಾರೆ.

ಬಿಜೆಪಿಯಿಂದ ಸಂವಿಧಾನಕ್ಕೆ ಅಪಾಯವಿದ್ದು, ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಲೋಕ ಚುನಾವಣೆಯಲ್ಲಿ ಕಾಂಗ್ರಸ್‌ ಮತ ಪಡಿದಿದೆ. ಆದರೆ, ಅಮೆರಿಕಾದಲ್ಲಿ ರಾಹುಲ್‌ ಅವರು ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ರಾಹುಲ್‌ ಅವರ ಬಾಯಿಂದ ಈ ಮಾತನ್ನು ನೀರೀಕ್ಷಿಸರಿರಲಿಲ್ಲ ಎಂದು ಬೇಸರ ಅವರು ವ್ಯಕ್ತಪಡಿಸಿದರು.

ರಾಗಾ ಅಮೆರಿಕಾದಲ್ಲಿ ಹೇಳಿರುವುದೇನು..?
ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಅವರು, ಭಾರತದಲ್ಲಿ ಸಮಾನತೆಯ ಸ್ಥಿತಿ ನೋಡಿದ ನಂತರ ಮುಂದಿನ ದಿನಗಳಲ್ಲಿ ಮೀಸಲಾತಿ ರದ್ದತಿ ಕುರಿತು ಕಾಂಗ್ರೆಸ್ ಚಿಂತಿಸಲಿದೆ ಎಂದು ಹೇಳಿದ್ದಾಗಿ ವರದಿಯಾಗಿತ್ತು. ಬಳಿಕ ರಾಹುಲ್‌ ಅವರು ಮಾಧ್ಯಮ ಸಂವಾದದಲ್ಲಿ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಿದ್ದಾರೆ. ಆದರೆ ನಾನು ಶೇ.50 ರಷ್ಟು ಮೀರಿ ಮೀಸಲಾತಿಯನ್ನು ವಿಸ್ತರಿಸಲಿದ್ದೇವೆ ಎಂದು ಹೇಳಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

2 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

3 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

4 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

4 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

10 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

10 hours ago