ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿನ ರಾಷ್ಟ್ರಪತಿ ಭವನ ಸಾಂಸ್ಕೃತಿಕ ಕೇಂದ್ರದಲ್ಲಿಂದು 11ನೇ ನೀತಿ ಆಯೋಗ ಆಡಳಿತ ಮಂಡಳಿ ಸಭೆ ನಡೆಯಿತು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿಗಳಾದ ಕರ್ನಾಟಕದ ಡಿ.ಕೆ.ಶಿವಕುಮಾರ್, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ, ಬಿಹಾರದ ಸಾಮ್ರಾಟ್ ಚೌಧರಿ, ದಿಲ್ಲಿಯ ರೇಖಾ ಗುಪ್ತಾ, ಹರಿಯಾಣ ನಯಾಬ್ ಸಿಂಗ್ ಸೈನಿ, ಪಶ್ಚಿಮ ಬಂಗಾಳ ಸುವೇಂದು ಅಧಿಕಾರಿ, ತಮಿಳುನಾಡಿನ ಸಿ.ಜೋಸೆಫ್ ವಿಜಯ್, ಕೇರಳದ ವಿ.ಡಿ.ಸತೀಶನ್ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಆಡಳಿತಾಧಿಕಾರಿಗಳು, ನೀತಿ ಆಯೋಗದ ಉಪಾಧ್ಯಕ್ಷರು, ಸದಸ್ಯರು ಮತ್ತು ನಾಯಕರು ಸಭೆಯಲ್ಲಿ ಹಾಜರಿದ್ದರು.
ಈ ವರ್ಷ ನೀತಿ ಆಯೋಗದ ಸಭೆಯು ವಿಕಸಿತ ಭಾರತ 2047ಕ್ಕೆ ಸಮಗ್ರ ಮಾನವ ಅಭಿವೃದ್ಧಿ ಧ್ಯೇಯದ ಮೇಲೆ ನಡೆದಿದೆ. ಇದು ವಯಸ್ಸು, ಪ್ರದೇಶ, ಲಿಂಗ ಅಥವಾ ಸಾಮಾಜಿಕ ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಎಲ್ಲಾ ನಾಗರಿಕರ ಯೋಗಕ್ಷೇಮ ಮತ್ತು ಅಭಿವೃದ್ಧಿಗೆ ಒತ್ತು ನೀಡುತ್ತದೆ.
ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ ಉದ್ಯಮಶೀಲತೆ, ಕೌಶಲಾಭಿವೃದ್ಧಿ ಮತ್ತು ಸುಸ್ಥಿರ ಉದ್ಯೋಗಾವಕಾಶ ಸೃಷ್ಟಿಗೆ ಉತ್ತೇಜಿಸಿ ಚರ್ಚೆ ನಡೆಸಲಿದ್ದಾರೆ.
ಸಮಗ್ರ ಮಾನವ ಅಭಿವೃದ್ಧಿ ಚೌಕಟ್ಟು ನಾಲ್ಕು ಪ್ರಮುಖ ಸ್ತಂಭಗಳ ಮೇಲೆ ಆಧರಿತವಾಗಿದೆ. ಅವು ಮೂಲಭೂತ ಮಾನವ ಬಂಡವಾಳ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಕೌಶಲ್ಯಗಳು, ಉತ್ಪಾದಕ ಉದ್ಯೋಗ, ಉದ್ಯಮಶೀಲತೆ ಮತ್ತು ವಿಕೇಂದ್ರೀಕೃತ ಬೆಳವಣಿಗೆ, ಆರೋಗ್ಯ, ಪೋಷಣೆ ಮತ್ತು ಯೋಗಕ್ಷೇಮ ಮತ್ತು ಎಲ್ಲರಿಗೂ ಸಮಾನತೆ ಮತ್ತು ಘನತೆ ಎಂಬುದಾಗಿದೆ.
ಏನೆಲ್ಲಾ ಚರ್ಚೆ?
ಆಡಳಿತ, ಡಿಜಿಟಲ್ ಸಾರ್ವಜನಿಕ ಸೌಕರ್ಯ, ಪಾಲುದಾರಿಕೆಗಳು ಮತ್ತು ಡೇಟಾ ಚಾಲಿತ ವ್ಯವಸ್ಥೆಗಳು, ಅಲ್ಪ, ಮಧ್ಯಮ ಮತ್ತು ದೀರ್ಘಾವಧಿಯ ಫಲಿತಾಂಶ, ಸಮಾನ ಮತ್ತು ಸುಸ್ಥಿರ ಬೆಳವಣಿಗೆಯ ಕಡೆಗೆ ಏಕೀಕೃತ ಮತ್ತು ಸಹಯೋಗದ ವಿಧಾನವನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. ಜೊತೆಗೆ ನೀತಿ ಆಯೋಗದ ಆಡಳಿತ ಮಂಡಳಿಯು 2025ರ ಡಿಸೆಂಬರ್ 26 ರಿಂದ 28 ರವರೆಗೆ ನಡೆದ 5ನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದ ಶಿಫಾರಸುಗಳ ಮೇಲೂ ಗಮನ ಹರಿಸಿತು ಎಂದು ಮೂಲಗಳು ತಿಳಿಸಿವೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…