ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್ ಸೇರಿದಂತೆ 16 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಛತ್ತೀಸ್‌ಗಢ ಪೊಲೀಸರು ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸಿಆರ್‌ಪಿಎಫ್, ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 16 ನಕ್ಸಲರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಸೋಮವಾರ ತಡರಾತ್ರಿ ಹಾಗೂ ಇಂದು ಮುಂಜಾನೆ ಗುಂಡಿನ ಚಕಮಕಿ ನಡೆದಿದ್ದು, 16 ನಕ್ಸಲರು ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಮೃತರಲ್ಲಿ ಒಬ್ಬನನ್ನು ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ಜೈರಾಮ್ ಅಲಿಯಾಸ್ ಚಲಪತಿ ಎಂದು ಗುರುತಿಸಲಾಗಿದ್ದು, ಈತನ ಪತ್ತೆಗೆ 1 ಕೋಟಿ ರೂ ಘೋಷಿಸಲಾಗಿತ್ತು.