ದೇಶ- ವಿದೇಶ

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್:‌ 16 ಮಂದಿ ನಕ್ಸಲರ ಹತ್ಯೆ

ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್‌ ಜಿಲ್ಲೆಯ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್‌ ಸೇರಿದಂತೆ 16 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಛತ್ತೀಸ್‌ಗಢ ಪೊಲೀಸರು ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಸಿಆರ್‌ಪಿಎಫ್‌, ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 16 ನಕ್ಸಲರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ಹಾಗೂ ಇಂದು ಮುಂಜಾನೆ ಗುಂಡಿನ ಚಕಮಕಿ ನಡೆದಿದ್ದು, 16 ನಕ್ಸಲರು ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಮೃತರಲ್ಲಿ ಒಬ್ಬನನ್ನು ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ಜೈರಾಮ್‌ ಅಲಿಯಾಸ್‌ ಚಲಪತಿ ಎಂದು ಗುರುತಿಸಲಾಗಿದ್ದು, ಈತನ ಪತ್ತೆಗೆ 1 ಕೋಟಿ ರೂ ಘೋಷಿಸಲಾಗಿತ್ತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

15 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

24 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

25 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago