ಹೊಸದಿಲ್ಲಿ : ಸುಮಾರು 16 ವರ್ಷಗಳ ನಂತರ ಜನಗಣತಿ ನಡೆಸಲು ಕೇಂದ್ರದ ಎನ್.ಡಿ.ಎ ಸರ್ಕಾರವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಗಣತಿಯ 16ನೇ ಜನಗಣತಿ ಆಗಿದೆ.
2011ರಲ್ಲಿ ಕೊನೆಯ ಬಾರಿಗೆ ಗಣತಿ ನಡೆದಿತ್ತು. ಇದೀಗ 16 ವರ್ಷಗಳ ಬಳಿಕ ಜಾತಿ ಸೇರಿದಂತೆ ಇತರೆ ಪ್ರಮುಖ ಮಾಹಿತಿ ಕಲೆ ಹಾಕಲು ಗೃಹ ಇಲಾಖೆಯು ಜನಗಣತಿಯ ಅಧಿಸೂಚನೆಯನ್ನು ಹೊರಡಿಸಿದೆ. ಜನಗಣತಿ ಜೊತೆ ಜಾತಿಗಣತಿಯೂ ನಡೆಯುತ್ತಿರುದರಿಂದ ಇದು ಮಹತ್ವದ್ದಾಗಿದೆ.
ಲಡಾಖ್, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡದಂತಹ ಹಿಮದಿಂದ ಆವೃತ ಪ್ರದೇಶಗಳಲ್ಲಿ ಅಕ್ಟೋಬರ್ 1, 2026ರಂದು ಮತ್ತು ದೇಶದ ಉಳಿದ ಭಾಗಗಳಲ್ಲಿ ಮಾರ್ಚ್ 1, 2027 ರಂದು ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎರಡನೇ ಹಂತದಲ್ಲಿ, ಕರ್ನಾಟಕದಲ್ಲಿಯೂ 2027ರ ಮಾ. 1ರಿಂದ ಜನಗಣತಿ ನಡೆಯುತ್ತದೆ ಎಂದು ಜೂ. 16ರ ಗೆಜೆಟ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮನೆಪಟ್ಟಿ ಕಾರ್ಯಾಚರಣೆ ಎಂದೂ ಕರೆಯಲ್ಪಡುವ ಮೊದಲ ಹಂತದಲ್ಲಿ, ಆಸ್ತಿಗಳು, ಕುಟುಂಬದ ಆದಾಯ, ವಸತಿ ಪರಿಸ್ಥಿತಿಗಳು ಮತ್ತು ಸೌಕರ್ಯಗಳಿಗೆ ಸಂಬಂಧಿಸಿದ ಡೇಟಾವನ್ನು ಸಂಗ್ರಹಿಸಲಾಗುತ್ತದೆ. ಮುಂಬರುವ ಜನಗಣತಿಯು ಭಾರತದ ಮೊದಲ ಡಿಜಿಟಲ್ ಜನಗಣತಿಯಾಗಿರುವುದರಿಂದ, ಮೊದಲ ಬಾರಿಗೆ ಪ್ರತಿಕ್ರಿಯಿಸುವವರು ಮನೆಯಿಂದಲೇ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುತ್ತದೆ.
ಎರಡನೇ ಹಂತವಾದ ಜನಸಂಖ್ಯಾ ಗಣತಿ, ಮನೆಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ಬಗ್ಗೆ ಜನಸಂಖ್ಯಾ, ಸಾಮಾಜಿಕ-ಆರ್ಥಿಕ, ಸಾಂಸ್ಕೃತಿಕ ಮತ್ತು ಇತರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತದೆ. ಮೊದಲ ಬಾರಿಗೆ, ಜಾತಿ ಗಣತಿಯು ಜನಗಣತಿ ಆಯಾಮದ ಭಾಗವಾಗಲಿದೆ. ಅಸಲಿಗೆ, ಜೂ. 4ರಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಪ್ರಕಟಣೆಯಲ್ಲಿ ಈ ವಿಚಾರವನ್ನು ತಿಳಿಸಲಾಗಿತ್ತು. ಇದೀಗ, ಅದೇ ವಿಚಾರ, ಗೆಜೆಟ್ ನಲ್ಲಿ ಪ್ರಕಟವಾಗಿರುವುದರಿಂದ ಇದೀಗ ಈ ದಿನಾಂಕಗಳಿಗೆ ಅಧಿಕೃತ ಮುದ್ರೆ ಸಿಕ್ಕಂತಾಗಿದೆ.
ಈ ಬಾರಿ ದೊಡ್ಡಮಟ್ಟದ ಜನಗಣತಿ!
ಸುಮಾರು 34 ಲಕ್ಷ ಗಣತಿದಾರರು ಮತ್ತು ಮೇಲ್ವಿಚಾರಕರು ಈ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ, ಡಿಜಿಟಲ್ ಸಾಧನಗಳನ್ನು ಹೊಂದಿರುವ 1.3 ಲಕ್ಷ ಜನಗಣತಿ ಕಾರ್ಯಕರ್ತರು ಕಾರ್ಯ ನಿರ್ವಹಿಸಲಿದ್ದಾರೆ. ಈ ಜನಗಣತಿಯಲ್ಲಿ ಜಾತಿ ಎಣಿಕೆಯೂ ಇರುತ್ತದೆ ಎಂದು ಸರ್ಕಾರ ಹೇಳಿದೆ.
ಬ್ರಿಟಿಷರ ಆಡಳಿತದ ಸಮೀಕ್ಷೆಯೆ ಕೊನೆ ಜಾತಿ ಸಮೀಕ್ಷೆ
ಈ ಮುನ್ನ 1881 ಮತ್ತು 1931ರಲ್ಲಿ ಬ್ರಿಟೀಷರ ಆಡಳಿತದಲ್ಲಿ ಸಮಗ್ರ ಜಾತಿ ಸಮೀಕ್ಷೆ ನಡೆಸಲಾಗಿತ್ತು. ಆ ಬಳಿಕ ಇಲ್ಲಿಯವರೆಗೆ ದೇಶದಲ್ಲಿ ಜಾತಿ ಗಣತಿ ನಡೆದಿಲ್ಲ. ಇದೀಗ ಸರಿ ಸುಮಾರು 100 ವರ್ಷಗಳ ಬಳಿಕ ಮತ್ತೊಮ್ಮೆ ಜಾತಿಗಳ ಸಮೀಕ್ಷೆ ನಡೆಯುತ್ತಿದೆ. 2021ರಲ್ಲಿ ಜನಗಣತಿ ನಡೆಸಲು ಯೋಜಿಸಲಾಗಿತ್ತಾದರೂ ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಯನ್ನು ಸರಕಾರ ಕೈಬಿಟ್ಟಿತ್ತು. ಜಾತಿಗಣತಿ ಮತ್ತು ಜನಗಣತಿ ನಡೆಸುವ ಕಾರ್ಯಕರ್ತರು ಮತ್ತು ಉಸ್ತುವಾರಿಗಳಿಗೆ ಏಪ್ರಿಲ್ 2026ರ ಒಳಗಾಗಿ ತರಬೇತಿ ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಜನಗಣತಿ ಕಾಯ್ದೆ 1948ರ ಸೆಕ್ಷನ್ 3ರ ನಿಬಂಧನೆಯಂತೆ 16.06,2025 ರಂದು ತಾತ್ಕಾಲಿಕವಾಗಿ ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಕೇಂದ್ರ ಗೃಹ ಕಾರ್ಯದರ್ಶಿ, ರಿಜಿಸ್ಟ್ರಾರ್ ಜನರಲ್ ಮತ್ತು ಭಾರತದ ಜನಗಣತಿ ಆಯುಕ್ತ ಮೃತ್ಯುಂಜಯ್ ಕುಮಾರ್ ನಾರಾಯಣ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಜನಗಣತಿಯ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…