ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿ ಶಿಕ್ಷೆಗೊಳಗಾಗಿದ್ದ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್, ಇಂದು (ಆ.20-ಗುರುವಾರ) ದೆಹಲಿಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಸಜ್ಜನ್ ಕುಮಾರ್ ಅವರನ್ನು, ಸಫ್ದರ್‌ಜಂಗ್ ಆಸ್ಪತ್ರೆಗೆ ತುರ್ತಾಗಿ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಅವರ ಸಾವಿಗೆ ನಿಖರವಾದ ಕಾರಣವನ್ನು ಆಸ್ಪತ್ರೆಯು ಇನ್ನೂ ಸ್ಪಷ್ಟಪಡಿಸಿಲ್ಲ.
ಮೂರು ಬಾರಿ ಲೋಕಸಭೆ ಸದಸ್ಯರಾಗಿದ್ದ ಸಜ್ಜನ್ ಕುಮಾರ್, ‘ಔಟರ್ ದೆಹಲಿ’ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು ಪ್ರಮುಖ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದರು. 2018ರಲ್ಲಿ ಅಪರಾಧಿಯೆಂದು ತೀರ್ಪು ಬಂದ ನಂತರ, ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…