Mysore
19
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಅಮೇರಿಕಾ| ಎರಡು ಬಸ್‌ಗಳ ನಡುವೆ ಭೀಕರ ಅಪಘಾತ: 37 ಮಂದಿ ಸಾವು

ಬೊಲಿವಿಯಾ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಅಮೇರಿಕಾದ ಬೊಲಿವಿಯಾದಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಉಯುನಿ ಮತ್ಯ ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಉಯುನಿ ಪಟ್ಟಣದಲ್ಲಿರುವ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂದು ಬಸ್ಸು ಲ್ಯಾಟಿನ್‌ ಅಮೇರಿಕಾದ ಪ್ರಮುಖ ಕಾರ್ನೀವಲ್‌ ಆಚರಣೆಗಳಲ್ಲಿ ಒಂದಾದ ಒರುರೋಗೆ ಹೋಗುತ್ತಿದ್ದ ಸಂದರ್ಭದಲ್ಲಿ ಇನ್ನೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Tags:
error: Content is protected !!