ದೇಶ- ವಿದೇಶ

ವಿಪ್‌ ಜಾರಿಯಾಗಿದ್ದರೂ ಗೈರಾಗಿದ್ದ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು: ತನಿಖೆ ನಡೆಸಲು ಮುಂದಾದ ಪಕ್ಷ

ನವದೆಹಲಿ: ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಸ್ತಾವನೆಯ ವೇಳೆ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಗೈರಾಗಿದ್ದ ಹಿನ್ನೆಲೆಯಲ್ಲಿ ಪಕ್ಷ ತನಿಖೆ ನಡೆಸಲು ಮುಂದಾಗಿದೆ.

ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ನಿನ್ನೆ ಸಂಸತ್‌ನಲ್ಲಿ ಮಂಡಿಸಲಾಗಿದ್ದು, ವಿಸ್ತೃತ ಚರ್ಚೆಗೆಂದು ಜಂಟಿ ಸದನ ಸಮಿತಿಗೆ ಶಿಫಾರಸು ಮಾಡಲಾಗಿದೆ.

ಮಸೂದೆಯ ಪ್ರಸ್ತಾವನೆಗೆ ಮತದಾನ ನಡೆದಿದ್ದು, ಮಸೂದೆ ಪರವಾಗಿ 269 ಮತಗಳು ಬಂದಿವೆ. ಮಸೂದೆಯ ವಿರುದ್ಧವಾಗಿ 198 ಮತಗಳು ಚಲಾವಣೆಯಾಗಿವೆ.

ಇನ್ನು ಅಚ್ಚರಿ ಎಂದರೆ ಎಲ್ಲಾ ಸಂಸದರಿಗೂ ವಿಪ್‌ ಜಾರಿಯಾಗಿದ್ದರೂ ಆಡಳಿತಾರೂಢ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಮತದಾನದ ವೇಳೆ ಗೈರು ಹಾಜರಾಗಿದ್ದರು.

ಒಂದು ದೇಶ ಒಂದು ಚುನಾವಣೆ ಮಸೂದೆ ವೇಳೆ ಸದನದಲ್ಲಿ ಎಲ್ಲರೂ ತಪ್ಪದೇ ಹಾಜರಿರಬೇಕು ಎಂದು ಬಿಜೆಪಿ ವಿಪ್‌ ಜಾರಿ ಮಾಡಿತ್ತು. ಆದರೆ 20ಕ್ಕೂ ಹೆಚ್ಚು ಬಿಜೆಪಿ ಸಂಸದರು ಗೈರಾಗುವ ಮೂಲಕ ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಈ ಮೂಲಕ ಸಂಸದರು ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇನ್ನು ಹಲವು ಸಂಸದರು ವೈಯಕ್ತಿಕ ಮತ್ತು ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಗೈರುಹಾಜರಿಯ ಬಗ್ಗೆ ಮುಂಚಿತವಾಗಿ ತಿಳಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಬಿಜೆಪಿ ಮಿತ್ರ ಪಕ್ಷಗಳ ನಾಲ್ಕೈದು ಸಂಸದರೂ ಕೂಡ ಮತದಾನದ ವೇಳೆ ಹಾಜರಿರಲಿಲ್ಲ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತದೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಇನ್ನು ನಿನ್ನೆ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮೇಘವಾಲ್‌ ಅವರು ಮತಗಳ ವಿಭಜನೆಯ ನಂತರ ಲೋಕಸಭೆಯಲ್ಲಿ ಮಂಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

23 mins ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

1 hour ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

2 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

5 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

9 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

9 hours ago