ದೇಶ- ವಿದೇಶ

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗುಡ್‌ನ್ಯೂಸ್‌ ನೀಡಿದೆ.

ಎಲ್‌ಪಿಜಿ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ರಾಜ್ಯಗಳಿಗೆ ಹೆಚ್ಚುವರಿಯಾಗಿ ವಾಣಿಜ್ಯ ಬಳಕೆಗೆ ಶೇ.20ರಷ್ಟು ಅನಿಲ ಹಂಚಿಕೆ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ. ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23ರಿಂದ ಇದು (ಸೋಮವಾರ) ಜಾರಿಗೆ ಬರಲಿದೆ.

ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಢಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ 5 ಕೆಜಿ ಸಣ್ಣ ಸಿಲಿಂಡರ್ ಒದಗಿಸುವ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಹೆಚ್ಚುವರಿ ಅನುದಾನವು ಕೇವಲ ನಿಗದಿಪಡಿಸಿದ ವಲಯಗಳಿಗೆ ತಲುಪುವಂತೆ ನೋಡಿಕೊಳ್ಳಲು ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಗೃಹಬಳಕೆ ಎಲ್‌ಪಿಜಿ ಪೂರೈಕೆ ಸ್ಥಿರವಾಗಿದೆ. ವಿತರಕರಲ್ಲಿ ಯಾವುದೇ ಕೊರತೆ ಇಲ್ಲ. ಜತೆಗೆ ಪ್ಯಾನಿಕ್‌ ಬುಕಿಂಗ್‌ಗಳು ಕಡಿಮೆಯಾಗಿದ್ದು, ನಾಗರಿಕರು ವಿರತಣಾ ಕೇಂದ್ರಗಳ ಮುಂದೆ ಜಮಾಯಿಸದೇ ಮನೆ ವಿತರಣೆಯನ್ನು ಅವಲಂಬಿಸುವಂತೆ ಅವರು ಸೂಚಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago