ಮುಂಬೈ: ಅತೀ ಶೀಘ್ರದಲ್ಲಿ ಮಹಾತ್ಮ ಗಾಂಧಿ(ಹೊಸ) ಸರಣಿಯ 20 ರೂ ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಘೋಷಣೆ ಮಾಡಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಇಂಡಿಯಾದ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿಯನ್ನು ಹೊಂದಿರುವ 20 ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.
ಈ ನೋಟುಗಳ ವಿನ್ಯಾಸವು ಎಲ್ಲಾ ರೀತಿಯಲ್ಲೂ ಮಹಾತ್ಮ ಗಾಂಧಿ(ಹೊಸ) ಸರಣಿಯ 20 ನೋಟುಗಳಿಗೆ ಹೋಲುತ್ತದೆ. ಈ ಹಿಂದೆ ರಿಸರ್ವ್ ಬ್ಯಾಂಕ್ ಹೊರಡಿಸಿದ್ದ 20 ಮುಖಬೆಲೆಯ ಎಲ್ಲಾ ನೋಟುಗಳು ಕಾನೂನುಬದ್ಧವಾಗಿ ಚಲಾವಣೆಯಲ್ಲಿ ಮುಂದುವರಿಯುತ್ತವೆ ಎಂದು ಆರ್‌ಬಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ





