Trump Tariff
ವಾಷಿಂಗ್ಟನ್ : ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸುಂಕ ಅಗಸ್ಟ್ 1ರಿಂದಲೇ ಜಾರಿಯಾಗಲಿದೆ ಎಂದು ಬುಧವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ರುತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಟ್ರಂಪ್, ಭಾರತ ನಮ್ಮ ಸ್ನೇಹಿತನಾಗಿದ್ದರೂ ಅವರೊಂದಿಗೆ ನಾವು ವ್ಯವಹಾರ ಮಾಡಿರುವುದು ಕಡಿಮೆ. ಹೀಗಾಗಿ ಅಮೆರಿಕ ಅವರ ಸರಕುಗಳ ಮೇಲೆ ಅಧಿಕ ಸುಂಕ ವಿಧಿಸಿರುವುದಾಗಿ ಹೇಳಿದ್ದಾರೆ.
ಮುಂದುವರೆದು, ಎಲ್ಲಾ ದೇಶಗಳಿಗೆ ಹೋಲಿಸಿದರೆ ಅವರದ್ದು ಅಧಿಕ ಸುಂಕ, ಇಂದು ಆ.1 ರಿಂದ ಜಾರಿಯಾಗುವಂತೆ ಭಾರತಕ್ಕೆ ಶೇ.25 ರಷ್ಟು ಸುಂಕ ವಿಧಿಸಲಾಗಿದೆ ಎಂದಿದ್ದಾರೆ.
ಉಕ್ರೇನ್‌ನಲ್ಲಿ ನಡೆಯುತ್ತಿರುವ ಹತ್ಯೆಯನ್ನು ರಷ್ಯಾವು ನಿಲ್ಲಿಸಬೇಕು ಎಂದು ಪ್ರಪಂಚ ಆಗ್ರಹಿಸುತ್ತಿರುವಾಗ ರಷ್ಯಾದಿಂದ ಭಾರತವು ಇಂಧನ ಖರೀದಿಸುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲಿ. ಅದಲ್ಲದೇ, ಭಾರತವು ತನ್ನ ಬಹುಪಾಲು ಮಿಲಿಟರಿ ಉಪಕರಣಗಳನ್ನು ರಷ್ಯಾದಿಂದ ಖರೀದಿಸಿದ್ದಕ್ಕಾಗಿ ಭಾರತ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…