Mysore
20
scattered clouds

Social Media

ಸೋಮವಾರ, 26 ಜನವರಿ 2026
Light
Dark

ಕೇರಳಕ್ಕೆ ಸಾಗಿಸುತ್ತಿದ್ದ 20,000 ಜಿಲೆಟಿನ್ ಕಡ್ಡಿ ವಶ

gilatin sticks

ಕೊಯಮತ್ತೂರು : ಮಹತ್ವದ ಬೆಳವಣಿಗೆಯಲ್ಲಿ ಕೊಯಮತ್ತೂರು ಪೊಲೀಸರು ತಮಿಳುನಾಡಿನ ಸೇಲಂನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ೨೦,೦೦೦ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಮಥುಕರೈ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಾಲಕ ಸುಬ್ಬಯ್ಯನನ್ನು ಬಂಧಿಸಲಾಗಿದ್ದು, ಆರಂಭಿಕ ತನಿಖಾ ವರದಿಯ ಪ್ರಕಾರ, ಈ ಸರಕನ್ನು ವೆಟ್ರಿವೆಲ್ ಎಕ್ಸ್‌ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್ ತಯಾರಿಸಿ ಪ್ಯಾಕ್ ಮಾಡಿತ್ತು. ಇದನ್ನು ಕೇರಳದ ಮಲಪ್ಪುರಂ ಜಿಲ್ಲೆಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಚಾಲಕನನ್ನು ಈಗ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ವಿಚಾರಣೆ ನಡೆಸುತ್ತಿದೆ.

ಮಥುಕರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಛೋಟಕಗಳ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಎಟಿಎಸ್ ಸಂಭಾವ್ಯ ಭಯೋತ್ಪಾದಕ ಕೋನಗಳ ಬಗ್ಗೆ ತನಿಖೆ ನಡೆಸುತ್ತಿದೆ.

Tags:
error: Content is protected !!