gilatin sticks
ಕೊಯಮತ್ತೂರು : ಮಹತ್ವದ ಬೆಳವಣಿಗೆಯಲ್ಲಿ ಕೊಯಮತ್ತೂರು ಪೊಲೀಸರು ತಮಿಳುನಾಡಿನ ಸೇಲಂನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ೨೦,೦೦೦ ಜಿಲೆಟಿನ್ ಕಡ್ಡಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಮಥುಕರೈ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಾಲಕ ಸುಬ್ಬಯ್ಯನನ್ನು ಬಂಧಿಸಲಾಗಿದ್ದು, ಆರಂಭಿಕ ತನಿಖಾ ವರದಿಯ ಪ್ರಕಾರ, ಈ ಸರಕನ್ನು ವೆಟ್ರಿವೆಲ್ ಎಕ್ಸ್‌ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್ ತಯಾರಿಸಿ ಪ್ಯಾಕ್ ಮಾಡಿತ್ತು. ಇದನ್ನು ಕೇರಳದ ಮಲಪ್ಪುರಂ ಜಿಲ್ಲೆಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಚಾಲಕನನ್ನು ಈಗ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ವಿಚಾರಣೆ ನಡೆಸುತ್ತಿದೆ.
ಮಥುಕರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಛೋಟಕಗಳ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಎಟಿಎಸ್ ಸಂಭಾವ್ಯ ಭಯೋತ್ಪಾದಕ ಕೋನಗಳ ಬಗ್ಗೆ ತನಿಖೆ ನಡೆಸುತ್ತಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…