ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿರುವ ವೈಷ್ಣವ್, ಡಿಜಿಟಲ್ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಎರಡು ಹಂತಗಳಲ್ಲಿ ಜನಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
೨೦೨೬ರ ಏಪ್ರಿಲ್‌ನಿಂದ ಸೆಪ್ಟೆಂಬರ್ ಅವಽಯಲ್ಲಿ ನಡೆಯುವ ಮೊದಲ ಹಂತದ ವೇಳೆ ಮನೆಗಳ ಗಣತಿ ಮಾಡಲಾಗುವುದು. ೨೦೨೭ರ ಫೆಬ್ರುವರಿಯಲ್ಲಿ ಜನರ ಗಣತಿ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
೨೦೨೭ರ ಜನಗಣತಿಯು ಮೊದಲ ಡಿಜಿಟಲ್ ಗಣತಿಯಾಗಲಿದೆ. ದತ್ತಾಂಶ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಜನಗಣತಿ ಪ್ರಕ್ರಿಯೆಯ ಡಿಜಿಟಲ್ ವಿನ್ಯಾಸವನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಜನಗಣತಿ ಕಾರ್ಯದ ಜವಾಬ್ದಾರಿ ವಹಿಸಿಕೊಳ್ಳಲು ಅಗತ್ಯವಾಗಿರುವ ಅಧಿಕಾರಿಗಳ ನೇಮಕಾತಿಯನ್ನು ಜ.೧೫ರೊಳಗೆ ಪೂರ್ಣಗೊಳಿಸಬೇಕು ಎಂದು ಭಾರತೀಯ ನೋಂದಣಿಯ ಮಹಾನಿರ್ದೇಶನಾಲಯವು (ಆರ್‌ಜಿಐ) ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಿತ್ತು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…