Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

2029ರಲ್ಲೂ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೆ: ಕೇಂದ್ರ ಸಚಿವ ಅಮಿತ್‌ ಶಾ

ನವದೆಹಲಿ: ನಮ್ಮ ಮೈತ್ರಿಕೂಟದ ಕೇಂದ್ರ ಸರ್ಕಾರವು ಐದು ವರ್ಷಗಳನ್ನು ಪೂರೈಸಲಿದೆ ಹಾಗೂ 2029ರಲ್ಲೂ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅಮಿತ್‌ ಶಾ ಅವರು, ವಿರೋಧ ಪಕ್ಷಗಳು ಏನು ಹೇಳುತ್ತವೆಯೋ ಅದರ ಬಗ್ಗೆ ನೀವೆಲ್ಲಾ ಏನೂ ತಲೆಕೆಡಿಸಿಕೊಳ್ಳಬೇಡಿ. 2029ರಲ್ಲೂ ಎನ್‌ಡಿಎ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ವಿರೋಧಿಗಳಿಗೆ ಟಾಂಗ್‌ ನೀಡಿದರು.

ಅಲ್ಲದೇ, ಅನಿಶ್ಚಿತತೆ ಸೃಷ್ಟಿಸಲು ಯತ್ನಿಸುತ್ತಿರುವವರು ಈ ಸರ್ಕಾರ ಉಳಿಯುವುದಿಲ್ಲ ಎಂದು ಜನರಿಗೆ ಭಯ ಹುಟ್ಟಿಸುತ್ತಿದ್ದಾರೆ.

ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷವನ್ನು ಪೂರೈಸಲಿದೆ. ಅಲ್ಲದೇ ಮುಂದಿನ ಅವಧಿಯಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಈ ಬಗ್ಗೆ ಯಾರೂ ಸಂಶಯವನ್ನೇ ಪಡಬೇಡಿ. ಪ್ರತಿಪಕ್ಷದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುವತ್ತ ಎಲ್ಲರೂ ಚಿತ್ತ ಹರಿಸಿ ಎಂದಿದ್ದಾರೆ.

ಈ ಮೂಲಕ ವಿರೋಧಿಗಳಿಗೆ ಟಾಂಗ್‌ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಮಾತಿನುದ್ದಕ್ಕೂ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಟಾಂಗ್‌ ಕೊಟ್ಟಿದ್ದಾರೆ.

Tags:
error: Content is protected !!