ನವದೆಹಲಿ: ನಮ್ಮ ಮೈತ್ರಿಕೂಟದ ಕೇಂದ್ರ ಸರ್ಕಾರವು ಐದು ವರ್ಷಗಳನ್ನು ಪೂರೈಸಲಿದೆ ಹಾಗೂ 2029ರಲ್ಲೂ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅಮಿತ್ ಶಾ ಅವರು, ವಿರೋಧ ಪಕ್ಷಗಳು ಏನು ಹೇಳುತ್ತವೆಯೋ ಅದರ ಬಗ್ಗೆ ನೀವೆಲ್ಲಾ ಏನೂ ತಲೆಕೆಡಿಸಿಕೊಳ್ಳಬೇಡಿ. 2029ರಲ್ಲೂ ಎನ್‌ಡಿಎ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.
ಅಲ್ಲದೇ, ಅನಿಶ್ಚಿತತೆ ಸೃಷ್ಟಿಸಲು ಯತ್ನಿಸುತ್ತಿರುವವರು ಈ ಸರ್ಕಾರ ಉಳಿಯುವುದಿಲ್ಲ ಎಂದು ಜನರಿಗೆ ಭಯ ಹುಟ್ಟಿಸುತ್ತಿದ್ದಾರೆ.
ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷವನ್ನು ಪೂರೈಸಲಿದೆ. ಅಲ್ಲದೇ ಮುಂದಿನ ಅವಧಿಯಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಈ ಬಗ್ಗೆ ಯಾರೂ ಸಂಶಯವನ್ನೇ ಪಡಬೇಡಿ. ಪ್ರತಿಪಕ್ಷದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುವತ್ತ ಎಲ್ಲರೂ ಚಿತ್ತ ಹರಿಸಿ ಎಂದಿದ್ದಾರೆ.
ಈ ಮೂಲಕ ವಿರೋಧಿಗಳಿಗೆ ಟಾಂಗ್ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಾತಿನುದ್ದಕ್ಕೂ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…