ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.
ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ 20,000 ಕೋಟಿ ರೂಗಳಿಗೂ ಹೆಚ್ಚಿನ ಮೊತ್ತವನ್ನು 9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದಾರೆ. ದೇಶದಾದ್ಯಂತ 9.7 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 20,500 ಕೋಟಿ ರೂ.ಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾಯಿಸಲಾಗಿದೆ. ಈ ಯೋಜನೆಯಡಿ ಒಟ್ಟು ವಿತರಣೆಯನ್ನು 3.90 ಲಕ್ಷ ಕೋಟಿ ರೂ ಮೀರಿಸುತ್ತದೆ.
ಕೇಂದ್ರದ ಯೋಜನೆಗಳಾದ ಪಿಎಂ ಕಿಸಾನ್ ಯೋಜನೆ ಕೋಟ್ಯಾಂತರ ರೈತರಿಗೆ ವಾರ್ಷಿಕ 6000 ರೂಗಳ ಆರ್ಥಿಕ ಪ್ರಯೋಜನವನ್ನು ತಲಾ 2000 ರೂಗಳ ಮೂರು ಸಮಾನ ಕಂತುಗಳಲ್ಲಿ ನೀಡುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ನೋಂದಾಯಿತ ರೈತರು ಇ-ಕೆವೈಸಿ ಮಾಡುವುದು ಅತೀ ಅವಶ್ಯಕವಾಗಿದ್ದು, ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಬರುತ್ತದೆ.
ಇನ್ನು 19ನೇ ಕಂತಿನ ಹಣ ಜಮಾ ಆಗದಿದ್ದರೆ ಪಿಎಂ ಕಿಸಾನ್‌ಗೆ ಎಚ್ಚರಿಕೆ ನೀಡಿ ದೂರು ನೀಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಹಾಯವಾಣಿ ಸಂಖ್ಯೆ 011-24300606ಗೆ ಕರೆ ಮಾಡಿ ದೂರು ನೀಡಲು ಅವಕಾಶ ನೀಡಲಾಗಿದೆ





