ದೇಶ- ವಿದೇಶ

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 20ನೇ ಕಂತಿನ ಹಣ ಬಿಡುಗಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 20ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ಕಿಸಾನ್‌ ಸಮ್ಮಾನ್‌ ನಿಧಿಯ 20ನೇ ಕಂತಿನ 20,000 ಕೋಟಿ ರೂಗಳಿಗೂ ಹೆಚ್ಚಿನ ಮೊತ್ತವನ್ನು 9.7 ಕೋಟಿ ರೈತರ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡಿದ್ದಾರೆ. ದೇಶದಾದ್ಯಂತ 9.7 ಕೋಟಿಗೂ ಹೆಚ್ಚು ರೈತರ ಬ್ಯಾಂಕ್‌ ಖಾತೆಗಳಿಗೆ 20,500 ಕೋಟಿ ರೂ.ಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾಯಿಸಲಾಗಿದೆ. ಈ ಯೋಜನೆಯಡಿ ಒಟ್ಟು ವಿತರಣೆಯನ್ನು 3.90 ಲಕ್ಷ ಕೋಟಿ ರೂ ಮೀರಿಸುತ್ತದೆ.

ಕೇಂದ್ರದ ಯೋಜನೆಗಳಾದ ಪಿಎಂ ಕಿಸಾನ್‌ ಯೋಜನೆ ಕೋಟ್ಯಾಂತರ ರೈತರಿಗೆ ವಾರ್ಷಿಕ 6000 ರೂಗಳ ಆರ್ಥಿಕ ಪ್ರಯೋಜನವನ್ನು ತಲಾ 2000 ರೂಗಳ ಮೂರು ಸಮಾನ ಕಂತುಗಳಲ್ಲಿ ನೀಡುತ್ತದೆ. ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿಯಲ್ಲಿ ನೋಂದಾಯಿತ ರೈತರು ಇ-ಕೆವೈಸಿ ಮಾಡುವುದು ಅತೀ ಅವಶ್ಯಕವಾಗಿದ್ದು, ತಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಬರುತ್ತದೆ.

ಇನ್ನು 19ನೇ ಕಂತಿನ ಹಣ ಜಮಾ ಆಗದಿದ್ದರೆ ಪಿಎಂ ಕಿಸಾನ್‌ಗೆ ಎಚ್ಚರಿಕೆ ನೀಡಿ ದೂರು ನೀಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಸಹಾಯವಾಣಿ ಸಂಖ್ಯೆ 011-24300606ಗೆ ಕರೆ ಮಾಡಿ ದೂರು ನೀಡಲು ಅವಕಾಶ ನೀಡಲಾಗಿದೆ

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago