Mysore
25
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಕೇದಾರನಾಥ ದೇವಸ್ಥಾನದಲ್ಲಿ 228 ಕೆಜಿ ಚಿನ್ನ ನಾಪತ್ತೆ?

ಉತ್ತರಾಖಂಡ್:‌ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ತಿಳಿಸಿದ್ದಾರೆ.

ಉತ್ತರಾಖಂಡದ ಗರ್ವಾಲ್‌ ಹಿಮಾಲಯ ಶ್ರೇಣಿಯಲ್ಲಿರುವ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ್‌ ದೇವಾಲಯವು ವಿಶ್ವ ಪ್ರಸಿದ್ಧಿ ಪಡೆದಿದೆ.

ಈ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದ್ದು, ಈ ಬಗ್ಗೆ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಮಾಹಿತಿ ನೀಡಿದ್ದಾರೆ.

ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ ಎಂದು ಪ್ರಶ್ನೆ ಮಾಡಿದರು. ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ ಎಂದ ಅವರು, ಅಲ್ಲೂ ಕೂಡ ಮತ್ತೊಂದು ಹಗರಣ ನಡೆಯಲಿದೆ. ಚಿನ್ನ ಕಳುವಾಗಿರುವ ಬಗ್ಗೆ ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

Tags:
error: Content is protected !!