Mysore
16
clear sky

Social Media

ಮಂಗಳವಾರ, 20 ಜನವರಿ 2026
Light
Dark

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ: ಮತ್ತೆ ಮತಗಳ್ಳತನ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಇಂದು ದಾಖಲೆ ಸಮೇತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಬ್ಬ ಮಹಿಳೆ 25 ಬಾರಿ ವೋಟ್‌ ಮಾಡಿದ್ದಾರೆ. ನಾನು ಹೇಳುತ್ತಿರುವುದು 100% ಸತ್ಯ. ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.

ಇದನ್ನು ಓದಿ: ವೋಟ್‌ ಚೋರಿ : ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ 

ಹಲವು ರಾಜ್ಯಗಳಲ್ಲಿ ಮತ ಕಳ್ಳತನದ ದೂರುಗಳು ನಮಗೆ ಬಂದಿವೆ. ಎಲ್ಲಾ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್‌ ಗೆಲುವಿನತ್ತ ಬೆರಳು ತೋರಿಸಿದ್ದವು. ಹರಿಯಾಣದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳು ನಿಜವಾದ ಮತದಾನಕ್ಕಿಂತ ಭಿನ್ನವಾಗಿದ್ದವು. ಇದು ನನಗೆ ಆಶ್ಚರ್ಯವನ್ನುಂಟುಮಾಡಿದೆ. ನೀವೆಲ್ಲಾ ನೋಡಲಿರುವ ಈ ಮಾಹಿತಿಯನ್ನು ನಾನು ಮೊದಲು ನೋಡಿದಾಗ ನಾನು ಅದನ್ನು ನಂಬಲು ಕಷ್ಟಪಟ್ಟೆ. ನಾನು ತೀವ್ರ ಆಘಾತಕ್ಕೊಳಗಾಗಿದ್ದೆ ಎಂದು ಹೇಳಿದರು.

ಸೆಪ್ಟೆಂಬರ್.‌17ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಚುನಾವಣಾ ಆಯೋಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಗಳನ್ನು ಸುಳ್ಳು ಹಾಗೂ ಆಧಾರರಹಿತ ಎಂದು ತಳ್ಳಿಹಾಕಿತ್ತು.

Tags:
error: Content is protected !!