ನವದೆಹಲಿ: ಮತ್ತೆ ಮತಗಳ್ಳತನ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ದಾಖಲೆ ಸಮೇತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಬ್ಬ ಮಹಿಳೆ 25 ಬಾರಿ ವೋಟ್ ಮಾಡಿದ್ದಾರೆ. ನಾನು ಹೇಳುತ್ತಿರುವುದು 100% ಸತ್ಯ. ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಇದನ್ನು ಓದಿ: ವೋಟ್ ಚೋರಿ : ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ
ಹಲವು ರಾಜ್ಯಗಳಲ್ಲಿ ಮತ ಕಳ್ಳತನದ ದೂರುಗಳು ನಮಗೆ ಬಂದಿವೆ. ಎಲ್ಲಾ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಗೆಲುವಿನತ್ತ ಬೆರಳು ತೋರಿಸಿದ್ದವು. ಹರಿಯಾಣದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳು ನಿಜವಾದ ಮತದಾನಕ್ಕಿಂತ ಭಿನ್ನವಾಗಿದ್ದವು. ಇದು ನನಗೆ ಆಶ್ಚರ್ಯವನ್ನುಂಟುಮಾಡಿದೆ. ನೀವೆಲ್ಲಾ ನೋಡಲಿರುವ ಈ ಮಾಹಿತಿಯನ್ನು ನಾನು ಮೊದಲು ನೋಡಿದಾಗ ನಾನು ಅದನ್ನು ನಂಬಲು ಕಷ್ಟಪಟ್ಟೆ. ನಾನು ತೀವ್ರ ಆಘಾತಕ್ಕೊಳಗಾಗಿದ್ದೆ ಎಂದು ಹೇಳಿದರು.
ಸೆಪ್ಟೆಂಬರ್.17ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಚುನಾವಣಾ ಆಯೋಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಗಳನ್ನು ಸುಳ್ಳು ಹಾಗೂ ಆಧಾರರಹಿತ ಎಂದು ತಳ್ಳಿಹಾಕಿತ್ತು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…