Mysore
23
light rain

Social Media

ಗುರುವಾರ, 13 ಆಗಸ್ಟ್ 2026
Light
Dark

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ.

ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೂ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಜಿ ಅವರೊಂದಿಗೆ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

ಅಗ್ನಿ ಅವಘಡದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಹತ್ತಿರದ ಸಂಬಂಧಿಸಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Tags:
error: Content is protected !!