ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ.
ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ.
ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೂ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಗೋವಾ ಸಿಎಂ ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುತ್ತದೆ ಎಂದು ತಿಳಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಹತ್ತಿರದ ಸಂಬಂಧಿಸಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…