ರೂರ್ಕೆಲಾ (ಒಡಿಶಾ): 2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಸಾಮರ್ಥ್ಯವನ್ನು ತಲುಪುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಘೋಷಿಸಿದರು. ಇಲ್ಲಿನ ರೊರ್ಕೆಲಾ ಉಕ್ಕು ಸ್ಥಾವಕ್ಕೆ ಭೇಟಿಯ ನಂತರ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿಪಡಿಸಿರುವ ಈ ಗುರಿಯನ್ನು ಮುಟ್ಟಲು ರೊರ್ಕೆಲಾ ಉಕ್ಕು ಸ್ಥಾವರದ (ಆರ್‌ಎಸ್‌ಪಿ) ವಿಸ್ತರಣೆ ಮತ್ತು ಉಕ್ಕು ಕ್ಷೇತ್ರದ ವ್ಯಾಪಕ ಅಭಿವೃದ್ಧಿಗೆ ಒಡಿಶಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು. ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಮೋದಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಉಕ್ಕು ಉತ್ಪಾದನೆಯ ಮುಂಚೂಣಿ ರಾಜ್ಯಗಳಲ್ಲಿ ಒಂದಾದ ಒಡಿಶಾ ಸರ್ಕಾರವೂ ಕೇಂದ್ರಕ್ಕೆ ಎಲ್ಲಾ ಸಹಕಾರವನ್ನು ನೀಡಲಿದೆ.
ಈ ಬಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಜತೆ ನಡೆಸಿರುವ ಮಾತುಕತೆ ಫಲಪ್ರಧವಾಗಿದೆ ಎಂದು ಅವರು ಹೇಳಿದರು. ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರನ್ನು ಬುಧವಾರ ಭುವನೇಶ್ವರದಲ್ಲಿ ಭೇಟಿ ಭೇಟಿ ಮಾಡಿ, ರಾಜ್ಯದಲ್ಲಿನ ಉಕ್ಕು ಸಂಬಂಧಿತ ಅಭಿವೃದ್ಧಿ, ವಿಶೇಷವಾಗಿ ರೂರ್ಕೆಲಾ ಉಕ್ಕು ಸ್ಥಾವರದ ಕಾರ್ಯಾಚರಣೆಗಳು ಮತ್ತು ವಿಸ್ತರಣೆ ಯೋಜನೆಗಳ ಬಗ್ಗೆ ವಿವರವಾದ ಮಾತುಕತೆ, ಪರಿಶೀಲನೆ ನಡೆಸಿದರು.
ಈ ಸಭೆಯಲ್ಲಿ ಒಡಿಶಾ ರಾಜ್ಯದವರೇ ಆದ ಕೇಂದ್ರದ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಜುಯಲ್ ಓರಾಮ್ ಕೂಡ ಹಾಜರಿದ್ದರು. ಈ ಮಾತುಕತೆಯನ್ನು “ಅತ್ಯಂತ ಫಲಪ್ರದ” ಎಂದು ಬಣ್ಣಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಪ್ರಮುಖ ಉಕ್ಕು ಮತ್ತು ಗಣಿಗಾರಿಕೆ ಕೇಂದ್ರವಾಗಿ ಒಡಿಶಾದ ಸ್ಥಾನವನ್ನು ಬಲಪಡಿಸುವ ಬಗ್ಗೆ ಚರ್ಚೆಗಳು ಕೇಂದ್ರೀಕೃತವಾಗಿದ್ದವು. ಉಕ್ಕು ಸಚಿವಾಲಯ ಮತ್ತು ಒಡಿಶಾ ಸರ್ಕಾರದ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು ಎಂಬುದಾಗಿ ಮಾಹಿತಿ ನೀಡಿದರು. ಮಾತುಕತೆಗಳು ಮೂರು ಪ್ರಮುಖ ಕ್ಷೇತ್ರಗಳ ಬಗ್ಗೆ ಕೇಂದ್ರೀಕೃತವಾಗಿದ್ದವು ಎಂದ ಸಚಿವರು; “ರೂರ್ಕೆಲಾ ಉಕ್ಕು ಸ್ಥಾವರದ ಕಾರ್ಯನಿರ್ವಹಣೆ, ಸೌಲಭ್ಯದ ಯೋಜಿತ ವಿಸ್ತರಣೆ ಮತ್ತು ಒಡಿಶಾದಲ್ಲಿ ಉಕ್ಕು ಮತ್ತು ಗಣಿಗಾರಿಕೆ ಉತ್ಪಾದನೆಯನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ನಾವು ಚರ್ಚಿಸಿದ್ದೇವೆ” ಎಂದರು. ಶ್ರೀಮಂತ ಖನಿಜ ಸಂಪನ್ಮೂಲಗಳು ಮತ್ತು ಬಲವಾದ ಕೈಗಾರಿಕಾ ನೆಲೆಯನ್ನು ಹೊಂದಿರುವ ಒಡಿಶಾ ರಾಜ್ಯವು ಭಾರತದ ಉಕ್ಕಿನ ಬೆಳವಣಿಗೆಯ ಕಾರ್ಯತಂತ್ರಕ್ಕೆ ಅತ್ಯಗತ್ಯ ಆಧಾರಸ್ತಂಭವಾಗಿ ಉಳಿದಿದೆ ಎಂದು ಕೇಂದ್ರದ ಉಕ್ಕು ಸಚಿವರು ಒತ್ತಿ ಹೇಳಿದರು. ರೋರ್ಕೆಲಾ ಸ್ಥಾವರದ ವಿಸ್ತರಣೆ ಮತ್ತು ಉಕ್ಕಿನ ಕ್ಷೇತ್ರದ ವ್ಯಾಪಕ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. “2030 ರ ವೇಳೆಗೆ 300 ಮಿಲಿಯನ್ ಟನ್ ಉಕ್ಕಿನ ಸಾಮರ್ಥ್ಯವನ್ನು ತಲುಪುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಸಾಧಿಸಲು ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದರು” ಎಂದು ಸಚಿವರು ತಿಳಿಸಿದರು. ರೂರ್ಕೆಲಾ ಉಕ್ಕು ಸ್ಥಾವರದ ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸಲು ವಿಸ್ತರಣಾ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಾಗಿದೆ.
ಇದನ್ನೂ ಓದಿ:-ಹಿಂದುಳಿದವರು-ದಲಿತರು BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿದ್ದರಾಮಯ್ಯ ಬೇಸರ
ಈಗಾಗಲೇ ೯,೦೦೦ ಕೋಟಿ ಮೊತ್ತದ ಯೋಜನೆಗಳು ಅನುಷ್ಠಾನಗೊಂಡು ಕಾರ್ಯಾರಂಭ ಮಾಡಿವೆ. ಜತೆಗೆ ೯.೫೧೩ ಕೋಟಿ ಮೊತ್ತದ ಯೋಜನೆಗಳು ಕಾರ್ಯಗತವಾಗಲು ತಯಾರಿವೆ ಎಂದು ಹೇಳಿದರು. ಒಟ್ಟು ೧೮, ೫೧೩ ಕೋಟಿ ಮೊತ್ತದ ಬೃಹತ್ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಉಕ್ಕು ಕ್ಷೇತ್ರದಲ್ಲಿ ರೊರ್ಕೆಲಾ ಸ್ಥಾವರವು ಪ್ರಮುಖ ಪಾಲುದಾರನಾಗಿ ಹೊರಹೊಮ್ಮಲಿದೆ ಎಂದು ಸಚಿವರು ಮಾಹಿತಿ ನೀಡಿದರು. ಕಚ್ಚಾ ವಸ್ತುಗಳ ಸಕಾರಾತ್ಮಕ ಲಭ್ಯತೆಯ ಬಗ್ಗೆ ಒತ್ತಿ ಹೇಳಿದ ಸಚಿವರು; ಒಡಿಶಾ ಗಣಿ ಸಮೂಹವು ಈ ವರ್ಷ ಅದಿರು ಉತ್ಪಾದನೆಯನ್ನು 5%ಕ್ಕಿಂತ ಹೆಚ್ಚು ಹೆಚ್ಚಿಸಿದೆ ಮತ್ತು 2025–26ರ ಹಣಕಾಸು ವರ್ಷದಲ್ಲಿ ಸುಮಾರು 15 ದಶಲಕ್ಷ ಟನ್ ದಾಟುವ ನಿರೀಕ್ಷೆ ಇದೆ. ಇದು ಕಾರ್ಖಾನೆಗೆ ಬಲವಾದ ಕಚ್ಚಾವಸ್ತುಗಳ ಭದ್ರತೆಯನ್ನು ಖಚಿತಪಡಿಸುತ್ತದೆ ಎಂದರು. ಕಾರ್ಖಾನೆಯ ವಿಸ್ತರಣಾ ಕಾರ್ಯಸೂಚಿಯನ್ನು ವಿವರಿಸಿದ ಅವರು; “ನಾವು ಆರ್‌ಎಸ್‌ಪಿಉತ್ಪಾದನಾ ಸಾಮರ್ಥ್ಯವನ್ನು ಸುಮಾರು ₹30,000 ಕೋಟಿಗೆ ದ್ವಿಗುಣಗೊಳಿಸುತ್ತೇವೆ ಎಂದರು. ಸುಮಾರು ₹9,000 ಕೋಟಿ ವೆಚ್ಚದಲ್ಲಿ ಸ್ಥಾವರದ ಆಧುನೀಕರಣವನ್ನು ಸಹ ಕೈಗೊಳ್ಳಲಾಗಿದೆ. ಕಾರ್ಕಾನೆಯು ಜಾಗತಿಕವಾಗಿ, ಸ್ಪರ್ಧಾತ್ಮಕವಾಗಿ ಮತ್ತು ಭವಿಷ್ಯಕ್ಕೆ ತಕ್ಕಂತೆ ಸಿದ್ಧವಾಗಿರುವುದನ್ನು ಖಚಿತಪಡಿಸಿಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…