ಕೇಪ್‌ಟೌನ್: ಈಸ್ಟರ್ ಹಬ್ಬಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಸೇತುವೆ ಮೇಲಿಂದ ಉರುಳಿದ ಪರಿಣಾಮ 45 ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ನಡೆದಿದೆ.
ಮಮಟ್ಲಕಾ ಸೇತುವೆಯಿಂದ ಬಸ್ 164 ಅಡಿ ಕೆಳಕ್ಕೆ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತುಕೊಂಡಿದೆ. ಘಟನೆಯಲ್ಲಿ 45 ಮಂದಿ ಸಾವನ್ನಪ್ಪಿದ್ದು, 8 ವರ್ಷದ ಬಾಲಕನೊಬ್ಬ ಅದೃಷ್ಟವಷಾತ್ ಬದುಕುಳಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಏರ್‌ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಲಿಂಪೊಪೊ ಉತ್ತರ ಪ್ರಾಂತ್ಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಬಸ್ ವೇಗವಾಗಿ ಚಲಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗುರುಳಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್‌ನಲ್ಲಿದ್ದ ಜನರು ನೆರೆಯ ದೇಶವಾದ ನೆರೆ ದೇಶ ಬೋಟ್ಸ್‌ವಾನಾದಿಂದ ಈಸ್ಟರ್ ತೀರ್ಥಯಾತ್ರೆಗಾಗಿ ಮೊರಿಯಾ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್…
ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ…