Mysore
14
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳು ಬಂದ್‌

tourist spots Jammu and Kashmir

ಜಮ್ಮು-ಕಾಶ್ಮೀರ: ಪ್ರವಾಸಿಗರ ಹಿತದೃಷ್ಟಿಯಿಂದ ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಲಾಗಿದೆ.

ಕಳೆದ ವಾರದ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಮತ್ತೆ ಹೆಚ್ಚಿನ ಭಯೋತ್ಪಾದಕ ದಾಳಿಯ ಸಾಧ್ಯತೆ ಇರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

ಹೆಚ್ಚಿನ ಸುದ್ದಿ:- ಪಾಕ್‌ನಿಂದ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನೆ ದಿಟ್ಟ ಉತ್ತರ

ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸರ್ಕಾರವು ಕಾಶ್ಮೀರದಾದ್ಯಂತ 87 ಪ್ರವಾಸಿ ತಾಣಗಳಲ್ಲಿ 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಿದೆ.

ಪಹಲ್ಗಾಮ್‌ ದಾಳಿಯ ನಂತರ ಕಣಿವೆಯಲ್ಲಿ ಸಕ್ರಿಯ ಭಯೋತ್ಪಾದಕರ ಮನೆಗಳನ್ನು ನಾಶಪಡಿಸಿದ್ದಕ್ಕೆ ಪ್ರತೀಕಾರವಾಗಿ ಭಯೋತ್ಪಾದಕರು ಮತ್ತೆ ದಾಳಿ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ:- ಪಹಲ್ಗಾಮ್‌ ಉಗ್ರರ ದಾಳಿ ಬಗ್ಗೆ ಚರ್ಚಿಸಲು ವಿಶೇಷ ಸಂಸತ್‌ ಅಧಿವೇಶನ ನಡೆಸಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಈ ಹಿನ್ನೆಲೆಯಲ್ಲಿ ಗುಪ್ತಚರ ವರದಿಗಳು ಸೂಚಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಿ ಆದೇಶ ಹೊರಡಿಸಲಾಗಿದೆ.

Tags:
error: Content is protected !!