ಟೋಕಿಯೋ: ಜಪಾನ್‌ನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೂಕಂಪಕ್ಕೆ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ. ಅಂಗಡಿಗಳ ಕಿಟಕಿ ಗಾಜುಗಳು ಪುಡಿಯಾಗಿದ್ದು, ಭಯಭೀತರಾದ ಜನರು ಕಟ್ಟಡಗಳಿಂದ ಹೊರಗೆ ಓಡಿಬಂದಿದ್ದಾರೆ.
ಜಪಾನ್ ಹವಾಮಾನ ಇಲಾಖೆ ಕಂಪನದ ತೀವ್ರತೆಯನ್ನು 5.7 ಎಂದು ದಾಖಲಿಸಿದ್ದರೆ, ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ 5.5 ಎಂದು ವರದಿ ಮಾಡಿದೆ.
ಮುಂಜಾನೆ ಒಂದು ಗಂಟೆ ನಾಲ್ಕು ನಿಮಿಷದ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು, ಶಿಜುವೊಕಾ ಪ್ರಾಂತ್ಯದಲ್ಲಿ ಸುಮಾರು 40 ಕಿಲೋಮೀಟರ್ ಆಳದಲ್ಲಿತ್ತು.
ಐಚಿ, ಹಮಾಮಟ್ಸು, ಕ್ಯೋಟೋ, ನಾರಾ, ಯಮನಾಶಿ ಹಾಗೂ ಗಿಫು ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಬಳಿಕ ಸಣ್ಣ ಪ್ರಮಾಣದ ಮರುಕಂಪನಗಳೂ ಸಂಭವಿಸಿವೆ.
ಟೋಕಿಯೊದಲ್ಲಿ ಕಂಪನದ ಅನುಭವವಾಗಿಲ್ಲ ಎಂದು ವರದಿ ತಿಳಿಸಿದೆ.
ಹಾಸನ: ಹಾಸನದಲ್ಲಿ ಸರ್ಕಾರಿ ಕಡತಗಳ ವಿಲೇವಾರಿಗೆ ಲಕ್ಷಾಂತರ ರೂಪಾಯಿ ಹಣದ ಬೇಡಿಕೆ ಇಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ…
ಹಾಸನ: ಕುಟುಂಬ ಸಮೇತರಾಗಿ ಹಾಸನಾಂಬ ದೇವಿಯ ದರ್ಶನ ಪಡೆದ ಡಿ.ಕೆ. ಶಿವಕುಮಾರ್, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ನರಕ ಚತುರ್ದಶಿ ಹಿನ್ನೆಲೆಯಲ್ಲಿ…
ಬಸ್ತಾರ್: ಬೆಳಕಿನ ಹಬ್ಬ ದೀಪಾವಳಿಯನ್ನು ಭದ್ರತಾ ಸಿಬ್ಬಂದಿಯೊಂದಿಗೆ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ, ‘ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು’ ಎಂದು…
ನಂಜನಗೂಡು ತಾಲ್ಲೂಕು ಕೂಡ್ಲಾಪುರ ಗ್ರಾಮದ ರಸ್ತೆಯು ತೀರ ಹದಗೆಟ್ಟಿರುತ್ತದೆ. ಡಾಂಬರು ಇಲ್ಲದೆ ಕಲ್ಲುಮಣ್ಣುಗಳಿಂದ ಕೂಡಿದ್ದು ಸಂಚಾರ ದುರ್ಲಭವೆನಿಸಿದೆ. ಕಚ್ಚಾ ರಸ್ತೆಯಂತಿರುವ…
ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ರಾಜ್ಯಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಶಿಫಾರಸು ಮಾಡಿರುವುದು ಘೋರ…
ಮೈಸೂರಿನಿಂದ ಎಚ್. ಡಿ. ಕೋಟೆಗೆ ಬರಬೇಕಾದರೆ ಎಂ ಎಂ ಮುಖ್ಯ ರಸ್ತೆಯಲ್ಲಿರುವ ಆರ್‌ಪಿ ಸರ್ಕಲ (ರಾಜೇಂದ್ರ ಪ್ರಸಾದ್ ಸರ್ಕಲ್) ದಿನನಿತ್ಯ…