Mysore
24
moderate rain

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ.

ಚುನಾವಣಾ ಆಯೋಗದ ವಿಜ್ಞಾನ್ ಭವನ್‌ನಲ್ಲಿ ಭಾನುವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಏ.9ರಂದು ಚುನವಣಾ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್‌ 23 ರಂದು ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್‌ 23 ಮೊದಲ ಹಂತ, 29ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ಐದು ರಾಜ್ಯ ಮತ ಎಣಿಕೆ ಮೇ 4ರಂದು ನಡೆಯಲಿದೆ ಎಂದು ಮಾಹಿತಿ ನೀಡಿದರು.

ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬ, ಎಲ್ಲರೂ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು. ನಾಲ್ಕು ರಾಜ್ಯಗಳು ಒಂದು ಕೇಂದ್ರಾಡಳಿತ ಪ್ರದೇಶದ 2.19 ಲಕ್ಷ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 25 ಲಕ್ಷ ಚುನಾವಣಾ ಅಧಿಕಾರಿಗಳು ಕರ್ತವ್ಯದಲ್ಲಿರಲಿದ್ದಾರೆ ಎಂದು ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆಯಲ್ಲಿ 17.4 ಕೋಟಿ ಮತದಾನದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ತಿಳಿಸಿದ್ದಾರೆ.

Tags:
error: Content is protected !!