ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ತಿಳಿಸಿದ್ದಾರೆ.
ಈ ಬಗ್ಗೆ ಖಾಸಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ 185 ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತು ಅವರ ಆರೋಗ್ಯದ ಮೇಲೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿದದಾರೆ ಎಂದು ಅವರು ಹೇಳಿದ್ದಾರೆ.
ಈ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಜೂನ್.19ರಂದು ಕಲ್ಲಕುರಿಚಿಯಲ್ಲಿ ನಕಲಿ ಮದ್ಯಸೇವನೆಯಿಂದ 50 ಮಂದಿ ಮೃತರಾಗಿದ್ದು, ಮೃತರ ಸಂಬಂಧಿಕರಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದೆ ಸ್ಟಾಲಿನ್ ಸರ್ಕಾರ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…