ಕೇರಳ (ವಯನಾಡ್): ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ, ಚುರ್ಲಮಲಾ ಪ್ರದೇಶಗಳಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮೃತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ಸೋಮವಾರದಿಂದ ಸುರಿಯುತ್ತಿರುವ ಭಾರೀ ಮಳೆ ತಡರಾತ್ರಿ ಜೋರಾಗಿದ್ದು, ಮಧ್ಯರಾತ್ರಿ 2 ಗಂಟೆಯಿಂದ ಬೆಳಗಿನ ಜಾವ 6 ಗಂಟೆ ವೇಳೆಗೆ ಭಾರೀ ಭೂ ಕುಸಿತ ಉಂಟಾಗಿದೆ.
ಈ ಭೂಕುಸಿತದಲ್ಲಿ ನೂರಾರು ಮನೆಗಳು ಕೊಚ್ಚಿ ಹೋಗಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಚುರ್ಲಮಲಾ ಬಹುತೇಕ ಭೂ ಕುಸಿತಕ್ಕೆ ಸಿಕ್ಕಿದೆ. ಚುರ್ಲಮಲದಿಂದ ಮೆಪ್ಪಾಡಿ ಮಾರ್ಗ ಕಲ್ಪಿಸುವ ರಸ್ತೆ ಭಾಗಶಃ ನಾಶವಾಗಿದೆ.
ಚಾಲಿಯಾರ್ ನದಿ ಉಕ್ಕಿ ಅರಿಯುತ್ತಿದ್ದು, ಇದರ ರಭಸಕ್ಕೆ ಇಡೀ ಗ್ರಾಮವೇ ತತ್ತರಿಸಿ ಹೋಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಈ ಬಗ್ಗೆ ಕೇಂದ್ರ ಸರ್ಕಾರವೂ ಕೂಡಾ ಚರ್ಚೆ ಮಾಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ.
ಇನ್ನು ಚುರ್ಲಮಲಾ ಭೂಕುಸಿತದಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಎರಡು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದ್ದು, ಎಲ್ಲರ ರಕ್ಷಣೆ ಮಾಡುವ ಭರವಸೆ ಸಿಎಂ ಪಿಣರಾಯಿ ವಿಜಯನ್ ನೀಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…