ತೈವಾನ್: ತೈವಾನ್‌ನ ಪೂರ್ವ ಕರಾವಳಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೇರಿಕಾ ಭೂಸರ್ವೇಕ್ಷಣಾ ಇಲಾಖೆ ಹೇಳಿದೆ.
ಶುಕ್ರವಾರ ಬೆಳಿಗ್ಗೆ ಹುವಾಲಿಯನ್ ಬಳಿ 15 ಕಿಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದ್ದು, ರಿಕ್ಟರ್ ಮಾಪಕದಲ್ಲಿ ಪ್ರಬಲ ಭೂಕಂಪ ದಾಖಲಾಗಿದೆ. ಆದರೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಈ ಸ್ಥಳದಲ್ಲಿ ಭೂಕಂಪ ಸಂಭವಿಸಿದ ವೇಳೆ ಎಲಿವೇಟರ್‌ನಲ್ಲಿ ಸಿಕ್ಕಿದ್ದ ಇಬ್ಬರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿದ್ದಾರೆ.





