ದೇಶ- ವಿದೇಶ

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಮೇರಿಕಾ ಸಂಸತ್‌ ಅನುಮತಿಯಿಲ್ಲದೇ ಆರಂಭಿಸಿದ ಈ ಕಾರ್ಯಾಚರಣೆಗೆ ವಾರ್‌ ಪವರ್ಸ್‌ ಆಕ್ಟ್‌ ಅಡಿಯಲ್ಲಿ ನೀಡಲಾದ 60 ದಿನಗಳ ಗಡುವು ನಾಳೆಗೆ ಅಂತ್ಯಗೊಳ್ಳಲಿದೆ.

ಅಮೇರಿಕಾದ 1973 ರ ವಾರ್‌ ಪವರ್ಸ್‌ ಆಕ್ಟ್‌ ಪ್ರಕಾದ ಅಧ್ಯಕ್ಷರು ತುರ್ತು ಸಂದರ್ಭದಲ್ಲಿ ಕಾಂಗ್ರೆಸ್‌ನ ಪೂರ್ವಾನುಮತಿಯಿಲ್ಲದೇ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಳಬಹುದು. ಆದರೆ ಅಂತಹ ಕಾರ್ಯಾಚರಣೆಯ ಬಗ್ಗೆ 48 ಗಂಟೆಗಳ ಒಳಗಾಗಿ ಕಾಂಗ್ರೆಸ್‌ಗೆ ವರದಿ ಸಲ್ಲಿಸಬೇಕು.

ಕಾರ್ಯಾಚರಣೆ ಆರಂಭವಾದ 60 ದಿನಗಳ ಒಳಗಾಗಿ ಕಾಂಗ್ರೆಸ್‌ನಿಂದ ಅಧಿಕೃತ ಅನುಮೋದನೆ ಪಡೆಯಬೇಕು. ಒಂದು ವೇಳೆ ಕಾಂಗ್ರೆಸ್‌ ಅನುಮೋದನೆ ನೀಡದಿದ್ದರೆ ಅಧ್ಯಕ್ಷರು ತಮ್ಮ ಪಡೆಗಳನ್ನು ಹಿಂತೆಗೆದುಕೊಳ್ಳಬೇಕಾಗುತ್ತದೆ.

ಈ ಎಲ್ಲಾ ಬೆಳವಣಿಗಳ ನಡುವೆ ಟ್ರಂಪ್‌ ಸಂಕಷ್ಟಕ್ಕೆ ಸಿಲುಕಿದ್ದು, ಇದು ಮುಂದೆ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago