ಭೋಪಾಲ್: ಮಧ್ಯಪ್ರದೇಶ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ನೆಟ್ಟಿದೆ.
ಮತ್ತೆ ಮೂರು ಆನೆಗಳ ಸ್ಥಿತಿ ಗಂಭೀರವಾಗಿದ್ದು, ಅವುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆನೆಗಳ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಮೃತ ಆನೆಗಳಿಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕವೇ ಸತ್ಯಾಸತ್ಯತೆ ಏನೆಂದು ತಿಳಿಯಲಿದೆ.
ಅನ್ನದಾತರು ತಮ್ಮ ಬೆಳೆಗಳಿಗೆ ಕೀಟನಾಶಕ ಸಿಂಪಡಿಸಿದ್ದು, ಅದನ್ನು ತಿಂದ ಆನೆಗಳು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.
ಆನೆಗಳ ಸಾವಿಗೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಸದ್ಯದಲ್ಲೇ ಆನೆಗಳ ಸಾವಿಗೆ ನಿಖರ ಕಾರಣ ಏನೆಂದು ತಿಳಿಯಲಿದೆ.





