ದೇಶ- ವಿದೇಶ

ಮಧ್ಯ ಪ್ರದೇಶದಲ್ಲಿ 7 ಆನೆಗಳ ಸಾವು: ಸಾವಿನ ಸುತ್ತ ಅನುಮಾನದ ಹುತ್ತ

ಭೋಪಾಲ್:‌ ಮಧ್ಯಪ್ರದೇಶ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ನೆಟ್ಟಿದೆ.

ಮತ್ತೆ ಮೂರು ಆನೆಗಳ ಸ್ಥಿತಿ ಗಂಭೀರವಾಗಿದ್ದು, ಅವುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆನೆಗಳ ದಿಢೀರ್‌ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಮೃತ ಆನೆಗಳಿಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕವೇ ಸತ್ಯಾಸತ್ಯತೆ ಏನೆಂದು ತಿಳಿಯಲಿದೆ.

ಅನ್ನದಾತರು ತಮ್ಮ ಬೆಳೆಗಳಿಗೆ ಕೀಟನಾಶಕ ಸಿಂಪಡಿಸಿದ್ದು, ಅದನ್ನು ತಿಂದ ಆನೆಗಳು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

ಆನೆಗಳ ಸಾವಿಗೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಸದ್ಯದಲ್ಲೇ ಆನೆಗಳ ಸಾವಿಗೆ ನಿಖರ ಕಾರಣ ಏನೆಂದು ತಿಳಿಯಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

1 hour ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

1 hour ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

2 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

2 hours ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

2 hours ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

3 hours ago