ಡೆಹ್ರಾಡೂನ್: ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಮಂದಿ ಮೃತಪಟ್ಟಿದ್ದಾರೆ.
ಮಾನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಸಾರ್ವಜನಿಕರು ಆಗಮಿಸಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.
ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡ ಆಗಮಿಸಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಇನ್ನು ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.





