ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.
ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆಗಾಗಿ ಸಾವಿರಾರು ಭಕ್ತರು ಸೇರಿದ್ದರಿಂದ ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಘಟನೆ ನಡೆಯುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಮಾಹಿತಿಯ ಪ್ರಕಾರ ದೇವಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿದ್ದರಿಂದ ಪ್ರಾಣ ಉಳಿಸಿಕೊಳ್ಳಲು ಜನರು ಓಡಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…