ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು ಎಸೆದ ಘಟನೆಗೆ ಸಂಬಂಧಿಸಿದಂತೆ 8 ಮಂದಿ ಪ್ರತಿಪಕ್ಷದ ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಲಾಗಿದೆ.
ಮಾಣಿಕ್ಯ ಟ್ಯಾಗೋರ್, ಗುರ್ಜೀತಾ ಓಜ್ಲಾ, ರಾಣಾ ವಾರಿಂಗ್, ಇಬಿ ಈಡನ್, ಕಿರಣ್ ರೆಡ್ಡಿ, ವೆಂಕಟ ರಾಮನ್, ಅಮರಿಂದರ್ ಸಿಂಗ್, ಕಿರಣ್ ಕುಮಾರ್ ರೆಡ್ಡಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಘಟನೆ ಹಿನ್ನೆಲೆ: ಬಜೆಟ್ ಅಧಿವೇಶನದ ಕಲಾಪದ ವೇಳೆ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದವು. ಈ ಹಂತದಲ್ಲಿ ಸಂಸದರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದ್ದಲ್ಲದೇ, ಕೈಯಲ್ಲಿದ್ದ ಪೇಪರ್‌ಗಳನ್ನು ಹರಿದು ಸ್ಪೀಕರ್ ಪೀಠದ ಕಡೆಗೆ ತೂರಿದ್ದಾರೆ. ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸಭಾಧ್ಯಕ್ಷರು ಸಂಸದರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…