ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ.
ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಅವರುಗಳನ್ನು ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡ ಬಂಧಿಸಿದೆ.
ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾನಿ ಚೆಲ್ಲಪ್ಪ ಹೆಸರಿನ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ನಡೆದ ಆಪರೇಷನ್‍ನಲ್ಲಿ ನಟಿ ಸೇರಿದಂತೆ ಇತರರ ಬಂಧನವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರವಕ್ಕಂ ಎಂಬಲ್ಲಿ 33 ವರ್ಷದ ವಿಘ್ನೆಶ್ವರನ್ ಎಂಬಾತನನ್ನು ಪೊಲೀಸ್ ಬಂಧಿಸಿದ್ದರು. ಆತನ ವಿಚಾರಣೆ ಮಾಡಿದಾಗ ಆತ ವೆಂಕಟೇಶ್ ಹೆಸರಿನ ವ್ಯಕ್ತಿಯಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿರುವ ಅಂಶ ತಿಳಿದು ಬಂತು. ಬಳಿಕ ವೆಂಕಟೇಶ್ ಎಂಬಾತನನ್ನು ಪೊಲೀಸರು ಗ್ರಾಹಕನ ರೀತಿ ಸಂಪರ್ಕ ಮಾಡಿ, ಡ್ರಗ್ಸ್ ಮಾರುವಂತೆ ಹೇಳಿ, ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆ ವ್ಯಕ್ತಿ ಬಂದಾಗ ಆತನನ್ನು ಬಂಧಿಸಿ, ಆತನಿಂದ ಆರು ಗ್ರಾಂ ಮೆಥಾಫೆಟಮೈನ್, ಏಳು ಗ್ರಾಂ ಓಜಿ ಗಾಂಜಾ, ಹದಿನೈದು ಗ್ರಾಂ ಗಾಂಜಾ, ಸ್ಮೊಕಿಂಗ್ ಬಾಂಗ್, ಸ್ಟ್ಯಾಂಪ್ ಮತ್ತು ಒಂಬತ್ತು ಮೊಬೈಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಆತನ ಮಾಹಿತಿಯ ಮೇರೆಗೆ ಪೊಲೀಸರು ಇತರೆ ಕೆಲವರನ್ನು ಬಂಧಿಸಿದ್ದು, ಈ ವೇಳೆ, ನಟಿ ಅಂಜು ಕೃಷ್ಣ ಮತ್ತು ಸಹಾಯಕಿ ನಿರ್ದೇಶಕಿ ವಿನ್ಸಿ ನಿವೇತಾ ಅನ್ನು ಸಹ ಬಂಧಿಸಲಾಗಿದೆ. ಅಂಜು ಕೃಷ್ಣ ತಮಿಳಿನ ವೆಲ್ಲಿಮಲೈ ಮಲಯಾಳಂನ ಆರೊ, ಆಕಾಶಂ ಕದನ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…