ದೇಶ- ವಿದೇಶ

ಆಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಬಲಿ: ನೆರವಿಗೆ ನಿಂತ ಭಾರತ

ಕಾಬೂಲ್: ಪೂರ್ವ ಆಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೂ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಗತ್ಯ ನೆರವಿಗೆ ಧಾವಿಸಿದೆ.

ಭೂಕಂಪವು ಆಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್‌ ಅವರು ಆಫ್ಘಾನ್‌ ವಿದೇಶಾಂಗ ಸಚಿವ ಮೌಲವಿ ಅಮೀರ್‌ ಖಾನ್‌ ಮುತ್ತಕಿ ಅವರೊಂದಿಗೆ ಮಾತನಾಡಿ, ದುರಂತದಲ್ಲಿ ನಾಗರಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಆಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ ಎಂದು ತಿಳಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಆಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

2 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

3 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

3 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

3 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

3 hours ago