ದೇಶ- ವಿದೇಶ

ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ : ಕೇಂದ್ರ ಸ್ಪಂದನೆ

ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) ಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು; ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್ ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿದ್ದು, ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

2025 ನವೆಂಬರ್ 13ರಂದು ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿದ್ದ ಸಚಿವ ಕುಮಾರಸ್ವಾಮಿ ಅವರು; ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು.

ಇದನ್ನು ಓದಿ: ಮೈಸೂರು | ನಗರದ ವಿವಿಧೆಡೆ ಸಂವಿಧಾನ ದಿನಾಚರಣೆ : ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳ ಆತ್ಮಾವಲೋಕನ

ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯೆಲ್ ಅವರು, ಈ ಬಗ್ಗೆ ಉತ್ತರವನ್ನು ಬರೆದಿದ್ದಾರೆ. ಕರ್ನಾಟಕದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ. ಇಂಥ ಆಕಾಂಕ್ಷೆಗಳನ್ನು ಈಡೇರಿಸುವ ಕೇಂದ್ರದ ರಚನಾತ್ಮಕ ಕೇಂದ್ರ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಈ ಕ್ರಮವು ಒಂದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ಸಚಿವ ಗೋಯೆಲ್ ಅವರು ತಿಳಿಸಿದ್ದಾರೆ.

ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಕುರಿತಂತೆ ಗೋಯೆಲ್ ಅವರನ್ನು ಕುಮಾರಸ್ವಾಮಿ ಅವರು ಮನವೊಲಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರ ಜತೆ ಕುಮಾರಸ್ವಾಮಿ ಅವರು ಚರ್ಚಿಸಿದ್ದರು.

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬಂದರೆ ಇಡೀ ರಾಜ್ಯಕ್ಕೆ ನಾಲ್ಕು ದಿಕ್ಕುಗಳ್ಳಿಯೂ ಅನುಕೂಲ ಆಗುತ್ತದೆ.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ.

ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ:
ಪ್ರಸ್ತಾವಿತ ಈ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

7 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

7 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

7 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

7 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

7 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

10 hours ago