ದೇಶ- ವಿದೇಶ

ಮಕ್ಕಳ ಕಳ್ಳಸಾಗಣಿಕೆ: 95 ಮಕ್ಕಳ ರಕ್ಷಣೆ

ಅಯೋಧ್ಯೆ: 4ರಿಂದ 12 ವರ್ಷದೊಳಗಿನ ಮಕ್ಕಳನ್ನು ಬಿಹಾರದಿಂದ ಉತ್ತರಪ್ರದೇಶಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದಾಗ 95 ಮಕ್ಕಳನ್ನು ಅಯೋಧ್ಯೆಯ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ.

ಉತ್ತರ ಪ್ರದೇಶದ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚುತುರ್ವೇದಿ ಅವರು ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್‌ ಅವಸ್ತಿ ಅವರಿಗೆ ಕರೆ ಮಾಡಿ ಬಿಹಾರದಿಂದ ಅಪ್ರಾಪ್ತ ಮಕ್ಕಳನ್ನು ಅಕ್ರಮವಾಗಿ ಸಹರಾನ್‌ಪುರಕ್ಕೆ ಸಾಗಿಸಲಾಗುತ್ತಿದ್ದು, ಸದ್ಯ ಅವರನ್ನು ಗೋರಖ್‌ಪುರದಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಸರ್ವೇಶ್‌ ಅವಸ್ತಿ ಆಯೋಧ್ಯೆಯಲ್ಲಿ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಕ್ಷಿಸಲ್ಪಟ್ಟ ಮಕ್ಕಳು 4-12 ವರ್ಷದೊಳಗಿನವರಾಗಿದ್ದಾರೆ. ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದಾರೆಂದು ತಿಳಿದಿಲ್ಲ. ಪೋಷಕರನ್ನು ಸಂಪರ್ಕಿಸಿ ಮಕ್ಕಳನ್ನು ಒಪ್ಪಿಸಲಾಗುವುದು ಎಂದು ಮಕ್ಕಳ ಕಲ್ಯಾಣ ಆಯೋಗದ ಸದಸ್ಯರು ತಿಳಿಸಿದ್ದಾರೆ.

ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಇಂತಹ ಮಕ್ಕಳ ಕಳ್ಳ ಸಾಗಣಿಕೆಯು ಹೆಚ್ಚುತ್ತಿದ್ದು, ಅಲ್ಲಿ ಸರ್ಕಾರಗಳು ಇದರ ಬಗ್ಗೆ ಗಮನಹರಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

4 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

5 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

6 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

9 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

9 hours ago