ದೇಶ- ವಿದೇಶ

ಭದ್ರತಾ ಸಿಬ್ಬಂದಿ ವಾಹನದ ಮೇಲೆ ಬಾಂಬ್ ಸ್ಫೋಟ: 9 ಮಂದಿ ದುರ್ಮರಣ

ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟಿಸಿದ ಪರಿಣಾಮ ಓರ್ವ ಚಾಲಕ ಸೇರಿದಂತೆ 8 ಮಂದಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ಮುಗಿಸಿ ಹಿಂದಿರುಗುವ ವೇಳೆ ಛತ್ತೀಸ್‌ಗಢ್‌ ಬೀಜಾಪುರ್‌ ಜಿಲ್ಲೆಯ ಬೇದ್ರೆ-ಕುತ್ರು ರಸ್ತೆಯಲ್ಲಿ ಭದ್ರತೆ ಪಡೆಯ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ.

ಒಂದು ದಿನದ ಹಿಂದೆಯಷ್ಟೇ ಛತ್ತೀಸ್‌ಗಢದ ಬಸ್ತಾರ್‌ ಪ್ರದೇಶದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹಾಗೂ ಒಬ್ಬ ಹೆಡ್‌ ಕಾನ್ಸ್‌ಟೇಬಲ್‌ ಮೃತಪಟ್ಟಿದ್ದರು.

ಗುಂಡಿನ ದಾಳಿ ನಡೆಸಿದ ಬಳಿಕ ನಾಲ್ವರು ನಕ್ಸಲರ ಮೃತದೇಹ ಮತ್ತು AK-47 ರೈಫಲ್‌ ಹಾಗೂ ಸ್ವಯಂ ಲೋಡಿಂಗ್‌ ರೈಫಲ್‌ (SLR) ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದಾದ ಒಂದು ದಿನದ ನಂತರ ನಕ್ಸಲರು ಪ್ರತಿದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago