Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ.

ದಕ್ಷಿಣ ಕಾಶ್ಮೀರದ ಸೈದ್‌ಪೋರಾ ಪ್ರದೇಶದಲ್ಲಿ ಉಗ್ರನ ಮೃತದೇಹ ಪತ್ತೆಯಾಗಿದ್ದು, ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಐದು ದಿನಗಳ ಹಿಂದೆ ಸೈದ್‌ಪೋರಾದ ದಟ್ಟ ತೋಟವೊಂದರಲ್ಲಿ ಇಬ್ಬರು ಉಗ್ರರು ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಾರ್ಯಾಚರಣೆ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಮೃತ ಉಗ್ರನ ಗುರುತನ್ನು ಅಧಿಕೃತವಾಗಿ ದೃಢೀಕರಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:
error: Content is protected !!