ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ.
ದಕ್ಷಿಣ ಕಾಶ್ಮೀರದ ಸೈದ್‌ಪೋರಾ ಪ್ರದೇಶದಲ್ಲಿ ಉಗ್ರನ ಮೃತದೇಹ ಪತ್ತೆಯಾಗಿದ್ದು, ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಐದು ದಿನಗಳ ಹಿಂದೆ ಸೈದ್‌ಪೋರಾದ ದಟ್ಟ ತೋಟವೊಂದರಲ್ಲಿ ಇಬ್ಬರು ಉಗ್ರರು ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಾರ್ಯಾಚರಣೆ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಮೃತ ಉಗ್ರನ ಗುರುತನ್ನು ಅಧಿಕೃತವಾಗಿ ದೃಢೀಕರಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…