Mysore
23
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ಕೇಂದ್ರ ಸಚಿವ ಎಚ್‌ಡಿಕೆಯನ್ನು ಭೇಟಿ ಮಾಡಿದ ಸತೀಶ್‌ ಜಾರಕಿಹೊಳಿ

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಭಾರೀ ಮಟ್ಟದ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್‌.ಡಿ.ಕುಮಾಸ್ವಾಮಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ್ದು, ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ಕಂಡಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಸತೀಶ್‌ ಜಾರಕಿಹೊಳಿಯನ್ನು ಆಹ್ವಾನಿಸಿದ್ದರೆಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್‌ಡಿಕೆ ನಿವಾಸಕ್ಕೆ ಮಂಗಳವಾರ ರಾತ್ರಿ ಸತೀಶ್‌ ಜಾರಕಿಹೊಳಿ ತೆರಳಿ ಕೆಲ ಸಮಯ ಮಾತುಕತೆ ನಡೆಸಿ ಡಿನ್ನರ್‌ನಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಡಿನ್ನರ್‌ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಮತ್ತೊಂದು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ ಎಂದು ಹೇಳಬಹುದು.

Tags:
error: Content is protected !!