ದೇಶ- ವಿದೇಶ

ಅಮೇರಿಕದ ಡಾಲರ್‌ ಬದಲಿಗೆ ಹೊಸ ಕರೆನ್ಸಿ ಅಭಿವೃದ್ದಿ; ಶೇ 100 ಸುಂಕ ವಿಧಿಸುವುದಾಗಿ ಬ್ರಿಕ್ಸ್ ದೇಶಗಳಿಗೆ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್‌ ದೇಶಗಳು ಡಾಲರ್‌ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೇರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ಬ್ರಿಕ್ಸ್‌ ಗುಂಪಿನಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ದೇಶಗಳು ಇದ್ದವು. ಇದೀಗ ಇರಾನ್‌, ಸೌದಿ ಅರೇಬಿಯಾ, ಯುಎಇ, ಅರ್ಜೆಂಟೀನಾ, ಈಜಿಪ್ಟ್‌ ಮತ್ತು ಇಥಿಯೋಪಿಯಾ ದೇಶಗಳು ಸೇರ್ಪಡೆಗೊಂಡಿವೆ.

ಬ್ರಿಕ್ಸ್‌ ದೇಶಗಳು ಡಾಲರ್‌ನಿಂದ ದೂರ ಹೋಗುವ ಹಾಗಿಲ್ಲ ಎಂದು ಟ್ರಂಪ್‌ ಭಾನುವಾರ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಆದರೆ ಡಾಲರ್‌ಗೆ ಪರ್ಯಾಯಗಳನ್ನು ಸೃಷ್ಠಿಸುವ ಕುರಿತು ಬ್ರಿಕ್ಸ್‌ ದೇಶಗಳು ಧ್ವನಿಯೆತ್ತಿವೆ.

ಹೊಸ ಮೀಸಲು ಕರೆನ್ಸಿ ತಯಾರು ಮಾಡಲು ಚೀನಾ ಮತ್ತು ರಷ್ಯಾ ಮುಂಚೂಣಿಯಲ್ಲಿದ್ದಾವೆ. ಕಳೆದ ವರ್ಷ ರಷ್ಯಾದ ಕಝನ್‌ನಲ್ಲಿ ನಡೆದ ಶೃಂಗಸಭೆಗಳಲ್ಲಿ ಬ್ರಿಕ್ಸ್‌ ಕರೆನ್ಸಿ ಪ್ರಸ್ತಾಪವನ್ನು ಚರ್ಚಿಸಲಾಗಿತ್ತು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್‌ ಬದಲಿಗೆ ಯಾವುದೇ ಹೊಸ ಕರೆನ್ಸಿಯನ್ನು ಸೃಷ್ಠಿಸಿದರು ಆ ದೇಶಗಳು ಅಮೇರಿಕಾದಿಂದ ಶೇ. 100 ಸುಂಕಕ್ಕೆ ತುತ್ತಾಗಬೇಕಾಗುತ್ತದೆ. ಬ್ರಿಕ್ಸ್‌ ದೇಶಗಳು ಸೇರಿದಂತೆ ಇನ್ನುಳಿದ ದೇಶಗಳು ಬದಲಿ ಕರೆನ್ಸಿಯನ್ನು ಬೆಂಬಲಿಸುವುದಿಲ್ಲ ಎಂಬ ನಿಲುವು ಸ್ಪಷ್ಟಪಡಿಸಬೇಕಾಗಿದೆ. ಏನಾದರು ಪ್ರಯತ್ನ ಮಾಡಿದರೆ ಅಮೇರಿಕಾದ ಅದ್ಭುತ ಮಾರುಕಟ್ಟೆಯಿಂದ ದೂರ ಸರಿಯಬೇಕಾಗುತ್ತದೆ ಎಂದು ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ವಲಸೆ ಮತ್ತು ಮಾದಕ ದ್ರವ್ಯ ಕಳ್ಳ ಸಾಗಣೆ ಸಮಸ್ಯೆಗಳು ಮೆಕ್ಸಿಕೊ, ಕೆನಡಾ, ಚೀನಾ ದೇಶಗಳಲ್ಲಿ ಹೆಚ್ಚಾಗಿದೆ. ಇದು ಪ್ರಪಂಚಕ್ಕೆ ಮಾರಕ ಇಂತ ದೇಶಗಳಿಂದ ನಮಗೆ ರಫ್ತಾಗುವ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

15 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

17 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago