ದೇಶ- ವಿದೇಶ

ಭಾರತ್‌ ಜೋಡೋ ಯಾತ್ರೆಯಲ್ಲಿ ರಾಗಾ ಜೊತೆ ಕಾಣಿಸಿಕೊಂಡಿದ್ದ ಯುವತಿ ಶವವಾಗಿ ಪತ್ತೆ

ಚಂಡೀಗಢ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್‌ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ.

ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

ಹಿಮಾನಿ ನರ್ವಾಲ್ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

4 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

5 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

5 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

5 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

6 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

6 hours ago